ಎತ್ತಿನಗಾಡಿಗೆ ಬೈಕ್ ಡಿಕ್ಕಿ ಒಬ್ಬನ ಸಾವು, ಇಬ್ಬರಿಗೆ ಗಾಯ
ಚಳ್ಳಕೆರೆ,
ನ.19: ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದು ಬೈಕಿನ ಹಿಂದೆ ಕುಳಿತಿದ್ದ ವ್ಯಕ್ತಿಗೆ ತೀವ್ರ ಸ್ವರೂಪದ ಪೆಟ್ಟುಗಳು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. id="toptextpromo">ಈ
ಘಟನೆ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಬಳಿಯ ಕೊಂಡ್ಲಿಹನುಮಂತಪ್ಪ ಎಂಬುವವರ ಜಮೀನಿನ ಬಳಿ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಆಂಧ್ರಪ್ರದೇಶದ ಗುರುಮೂರ್ತಿ ಎಂದು ಗುರುತಿಸಲಾಗಿದೆ. id='are-slot-1' class='oiad oi-axt oiadv'> id='top-searched-articles'>ಆರೋಪಿ
ಬೈಕ್ ಸವಾರ ಪರಶುರಾಂಪುರದ ಶ್ರೀನಿವಾಸ ಎಂಬುವವನಾಗಿರುತ್ತಾನೆ. ಈ ಬಗ್ಗೆ ಪರಶುರಾಂಪುರ ಪೊಲೀಸ್ ಠಾಣೆಯಲಿ ಕೇಸು ದಾಖಲಾಗಿರುತ್ತದೆ. ಘಟನೆಯಲ್ಲಿ ಎತ್ತಿನಗಾಡಿ ಹಾಗೂ ಬೈಕು ಜಖಂಗೊಂಡಿದೆ. ಎತ್ತುಗಳಿಗೆ ಯಾವುದೇ ಹಾನಿಯಾಗದೆ ಸುರಕ್ಷಿತವಾಗಿವೆ. (ಒನ್‌ಇಂಡಿಯಾ ಕನ್ನಡ)











Click it and Unblock the Notifications