ಬಳ್ಳಾರಿ ಉಪಚುನಾವಣೆಗೆ 'ತಾರಾ' ಮೆರುಗು
ಬಳ್ಳಾರಿ,
ನ 21: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪಚುನಾವಣೆ ದಿನಗಳೆದಂತೆ ರಂಗೇರ ತೊಡಗಿದೆ. ಸೋಮವಾರ (ನ 21) ಬಿಜೆಪಿ ಅಭ್ಯರ್ಥಿಯ ಪರವಾಗಿ ನಟಿ ತಾರಾ ಪ್ರಚಾರದಲ್ಲಿ ಭಾಗವಹಿಸಿ ಪಕ್ಷದ ಪರವಾಗಿ ಮತಯಾಚಿಸಿದರು. id="toptextpromo">ಬಿಜೆಪಿ
ಮತ್ತು ಪಕ್ಷೇತರ ಅಭ್ಯರ್ಥಿ ಶ್ರೀರಾಮುಲುವಿಗೆ ಪ್ರತಿಷ್ಠೆಯ ಕಣವಾಗಿರುವ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ತಾರಾ, ಬಿಜೆಪಿ ಅಭ್ಯರ್ಥಿ ಗಾದಿ ಲಿಂಗಪ್ಪ ಪರ ಪ್ರಚಾರ ನಡೆಸಿ ಮತದಾರರ ಗಮನ ಸೆಳೆದರು. ಉತ್ತಮ ಆಡಳಿತಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ತಾರಾ ವಿನಂತಿಸಿ ಕೊಂಡಿದ್ದಾರೆ. id='are-slot-1' class='oiad oi-axt oiadv'> id='top-searched-articles'>ರಾಜ್ಯದಲ್ಲಿ
ಆಡಳಿತದಲ್ಲಿರುವ ಬಿಜೆಪಿ ಸರಕಾರ ಉತ್ತಮ ಆಡಳಿತ ನೀಡುತ್ತಿದೆ. ಉತ್ತಮ ಕೆಲಸಗಳ ಮೇಲೆ ನಂಬಿಕೆ ಇಟ್ಟಿರುವ ಜನರು ಬಿಜೆಪಿ ಪರ ಮತ ಚಲಾಯಿಸಲಿದ್ದಾರೆ ಎನ್ನುವ ನಂಬಿಕೆ ನನಗಿದೆ. ಹಿಂದುಳಿದ ಮತ್ತು ಮಹಿಳೆಯರ ಕಲ್ಯಾಣ ಕಾರ್ಯಕ್ರಮ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಬಿಜೆಪಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಮತದಾರರು ಪಕ್ಷದ ಅಭ್ಯರ್ಥಿ ಗಾದಿ ಲಿಂಗಪ್ಪ ಅವರಿಗೆ ಮತ ನೀಡಿ ಆಶೀರ್ವದಿಸ ಬೇಕೆಂದು ನಟಿ ತಾರಾ ಮತದಾರರಲ್ಲಿ ಕೇಳಿಕೊಂಡಿದ್ದಾರೆ.











Click it and Unblock the Notifications