ಗೃಹ ಸಚಿವ ಆರ್ ಅಶೋಕ್ ಗೆ ತಾತ್ಕಾಲಿಕ ರಿಲೀಫ್

ಅಶೋಕ್ ವಿರುದ್ಧದ ಭೂ ಹಗರಣ ಆರೋಪ ವಿರುದ್ಧ ಲೋಕಾಯುಕ್ತ ಸಂಸ್ಥೆ ತನಿಖೆ ವರದಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶವನ್ನು ಲೋಕಾಯುಕ್ತ ವಿಶೇಷ ನ್ಯಾಯಾಧೀಶ ಸುಧೀಂದ್ರ ರಾವ್ ನೀಡಿದ್ದಾರೆ.
ಒಂದು ತಿಂಗಳಿನ ಹೆಚ್ಚಿನ ಕಾಲಾವಕಾಶವನ್ನು ಪೊಲೀಸರಿಗೆ ನೀಡಲಾಗಿದ್ದು, ಡಿ.16ರೊಳಗೆ ಸಂಪೂರ್ಣ ತನಿಖಾ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ನ್ಯಾ. ಸುಧೀಂದ್ರ ರಾವ್ ಹೇಳಿದರು.
ಬೆಂಗಳೂರು ಉತ್ತರ ತಾಲೂಕು ರಾಜಮಹಲ್ ವಿಲಾಸ್ ಎರಡನೇ ಹಂತದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬಿಡಿಎಗೆ ಸೇರಿದ ನಿವೇಶನದ ಅಕ್ರಮ ಖರೀದಿ, 2009ರಲ್ಲಿ 9 ಎಕರೆಗೂ ಹೆಚ್ಚು ಜಮೀನಿನ ಅಕ್ರಮ ಡಿನೋಟಿಫಿಕೇಶನ್ ಮಾಡಿದ್ದಾರೆ.
ಇದರಿಂದ ಸರ್ಕಾರಕ್ಕೆ 50 ಕೋಟಿ ರು ನಷ್ಟವಾಗಿದೆ ಎಂದು ಪತ್ರಕರ್ತ ಜಯಕುಮಾರ್ ಹಿರೇಮಠ ಅವರು ಖಾಸಗಿ ದೂರು ಸಲ್ಲಿಸಿದ್ದರು. ಇದರ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಆದೇಶಿಸಿತ್ತು.












Click it and Unblock the Notifications