ಬಳ್ಳಾರಿ ಗ್ರಾಮಾಂತರದಲ್ಲಿ 2 ದಿನ ಯಡಿಯೂರಪ್ಪ ರೋಡ್‌ ಷೋ

Gadi Lingappa BJP candidate
ಬಳ್ಳಾರಿ, ನ. 22: ವೈಷ್ಣೋದೇವಿ ದರ್ಶನ ಪಡೆದು ನೇರವಾಗಿ ಬಳ್ಳಾರಿ ಚುನಾವಣಾ ಅಖಾಡಕ್ಕೆ ಧುಮುಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮತ್ತು ನಾಳೆ ಮಾತ್ರ ಬಹಿರಂಗ ಪ್ರಚಾರದಲ್ಲಿ ತೊಡಗಲಿದ್ದಾರೆ.

ಮಂಗಳವಾರ ಮತ್ತು ಬುಧವಾರ ಅವರು ರೋಡ್‌ ಷೋ ನಡೆಸಲಿದ್ದು, ಎರಡು ಸಮಾವೇಶ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಯಡಿಯೂರಪ್ಪ ಜತೆಗೆ ಪ್ರಚಾರ ನಡೆಸಲಿದ್ದು, ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್‌.ಈಶ್ವರಪ್ಪ ಅವರೂ ಸಾಥ್‌ ನೀಡಲಿದ್ದಾರೆ.

ಗಮನಾರ್ಹವೆಂದರೆ ಯಡಿಯೂರಪ್ಪ ಬುಧವಾರದ ನಂತರ ಅಗತ್ಯ ಕಂಡುಬಂದರೆ ಎರಡನೇ ಹಂತದಲ್ಲಿ ಮತ್ತೆ ಎರಡು ದಿನಗಳ ಕಾಲ ಅವರು ಪ್ರಚಾರ ನಡೆಸುವ ಸಾಧ್ಯತೆಯಿದೆ. ಭಾನುವಾರ ತಮ್ಮ ಇಷ್ಟ ದೇವತೆ ಕಾಶ್ಮೀರದಲ್ಲಿನ ವೈಷ್ಣೋದೇವಿ ದರ್ಶನ ಪಡೆದು ವಾಪಸಾಗಿದ್ದ ಯಡಿಯೂರಪ್ಪ ಮಂಗಳವಾರ ಬಳ್ಳಾರಿಯಲ್ಲಿ ಪ್ರಚಾರ ನಡೆಸಲು ಸಿದ್ಧರಾಗಿದ್ದಾರೆ.

ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿ ಜೈಲು ಸೇರಿದ್ದ ಯಡಿಯೂರಪ್ಪ ಅವರು ಜೈಲಿನಿಂದ ಹೊರಬರುವಷ್ಟರಲ್ಲಿ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗಿತ್ತು. ಆದರೆ, ಬಳ್ಳಾರಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಯಡಿಯೂರಪ್ಪ ಅವರನ್ನು ಕೊನೆಗೂ ಪಕ್ಷದ ವರಿಷ್ಠರು ಮನವೊಲಿಸುವಲ್ಲಿ ಯಶಸ್ವಿಯಾದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+