ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡೆಲ್ ಉದ್ಯೋಗಿ ಪಾಯಲ್ ಕೊಲೆ ಕೇಸಿಗೆ ನೋ ಎಂದ ಸಿಬಿಐ?

By Mahesh
|
Google Oneindia Kannada News

Dell employee Payal Surekha
ಬೆಂಗಳೂರು, ನ.23: ಡೆಲ್ ಬಿಪಿಒ ಉದ್ಯೋಗಿ, ಜೆಪಿನಗರ ಏಳನೇ ಹಂತದ ನಿವಾಸಿ ಪಾಯಲ್ ಸುರೇಖಾ(29) ಅಮಾನುಷ ಕೊಲೆ ಕೇಸ್ ಮತ್ತೆ ಹೊಸ ತಿರುವು ಪಡೆದುಕೊಂಡಿದೆ.

ಆರೋಪಿ ಜೇಮ್ಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮಾಜಿಸ್ಟ್ರೇಟ್ ನ್ಯಾಯಾಲಯ ಸಿಬಿಐ ತನಿಖೆಗೆ ಆದೇಶ ನೀಡಿತ್ತು. ಅದರೆ, ಸಿಬಿಐ ಕೇಸ್ ತೆಗೆದುಕೊಳ್ಳಲು ಮೀನಾ ಮೇಷ ಎನಿಸುತ್ತಿದೆ.

ಕೆಳ ಹಂತದ ನ್ಯಾಯಾಲಯ ಸಿಬಿಐಗೆ ನಿರ್ದೇಶನ ನೀಡುವ ಅಧಿಕಾರ ಇಲ್ಲ ಎನ್ನುವ ಸಣ್ಣ ಕಾರಣ ಹಿಡಿದುಕೊಂಡ ಎಳೆದಾಡುತ್ತಿರುವ ಸಿಬಿಐ, ಈ ಪ್ರಕರಣವನ್ನು ನೆನಗುದಿಯಲ್ಲಿಟ್ಟಿದೆ.

ಸೂಪಿರಿಯಾರಿಟಿ ಕಾಂಪ್ಲೆಕ್ಸ್ ಕಾರಣವೇ?: ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಮಾತ್ರ ತನಿಖೆ ಆದೇಶಿಸಿದರೆ ಪ್ರಕರಣ ಕೈಗೆತ್ತಿಕೊಳ್ಳಬೇಕು ಎಂಬ ಅಲಿಖಿತ ನಿಯಮವನ್ನು ಪಾಲಿಸುತ್ತಾ ಬಂದಿರುವ ಸಿಬಿಐ ಸಂಸ್ಥೆ ವರ್ತನೆ ಹಲವರ ಹುಬ್ಬೇರಿಸಿದೆ.

ಆದರೆ, ವಕೀಲ ಎಂಆರ್ ನಂಜುಡೇ ಗೌಡ ವಾದದ ಪ್ರಕಾರ ಹೈಕೋರ್ಟ್ ನಿರ್ದೇಶನದಂತೆ ಕೆಳ ನ್ಯಾಯಾಲಯ ತೀರ್ಪು ನೀಡಿದೆ. ಸಿಬಿಐ ಅಥವಾ ಸಿಐಡಿ ತನಿಖೆಗೆ ವಹಿಸಿದೆ ಎಂದರೆ ಪ್ರಕರಣದ ಸೂಕ್ಷ್ಮತೆಯನ್ನು ತನಿಖಾ ಸಂಸ್ಥೆಗಳು ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ.

ಪೊಲೀಸ್ ಫೈಲ್ ಕ್ಲೋಸ್ ಆಗಿದೆ: ಪಾಯಲ್ ಸುರೇಖಾ ಕೊಲೆ ಕೇಸಿಗೆ ಮುಕ್ತಾಯ ಹಾಡಿರುವ ಜೆಪಿ ನಗರ ಪೊಲೀಸರು, ಪಾಯಲ್ ಪತಿ ಅನಂತ್ ನಾರಾಯಣ ಮಿಶ್ರಾ ಹೇಳಿಕೆ ಪಡೆದು ಆತನ ಬಿಸಿನೆಸ್ ಪಾರ್ಟ್ನರ್ ಜೇಮ್ಸ್ ಕುಮಾರ್ ರಾಯ್ ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದರು.

ಆದರೆ, ಪಾಯಲ್ ತಂದೆ ಮಾತ್ರ 'ನನ್ನ ಮಗಳ ಅತ್ತೆ ಮನೆಯರ ಕೈವಾಡ ಇದೆ ಎಂದು ಶಂಕೆ ವ್ಯಕ್ತಪಡಿಸಿ ಮತ್ತೆ ತನಿಖೆಗೆ ಆಗ್ರಹಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

English summary
The additional chief metropolitan magistrate court of Bangalore ordered a CBI probe in Dell Employee Payal Surekha Murder Case. But, CBI is reluctant to take the case as order is not received higher courts such as high court or supreme court. With this Accused James Ray may get relief.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X