ಹೊಟೇಲಲ್ಲೇ ಆತ್ಮಹತ್ಯೆ ಮಾಡಿಕೊಂಡ ಅಡುಗೆಭಟ್ಟ
ಯಾದಗಿರಿ,
ನ. 23 : ನಗರದ ಬಾಲಾಜಿ ದೇವಸ್ಥಾನದ ಹತ್ತಿರವಿರುವ ಶಾರದಾಂಬೆ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಶರಣಪ್ಪ ಏಡ್ರಾಮಿ (45) ಎಂಬ ವ್ಯಕ್ತಿ ಸೋಮವಾರ ತಡರಾತ್ರಿ ಹೋಟೆಲ್‌ನಲ್ಲಿ ನೇಣಿಗೆ ಶರಣಾಗಿದ್ದಾನೆ. id="toptextpromo">ಈತ
ಗುಲಬರ್ಗಾ ಜಿಲ್ಲೆಯ ಜೇವರ್ಗಿ ತಾಲೂಕಿನವನಾಗಿದ್ದು, ಕಳೆದ ಐದು ವರ್ಷಗಳಿಂದ ಶಾರದಾಂಬೆ ಹೋಟೆಲ್‌ನಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ತೀವ್ರ ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಆತ್ಮಹತ್ಯೆ
ಮಾಡಿಕೊಂಡಿರುವುದು ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಪ್ರಕರಣ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಪೋಸ್ಟ್ ಮಾರ್ಟಂ ಆದನಂತರ ಸಂಬಂಧಿಕರಿಗೆ ಆತನ ದೇಹವನ್ನು ಒಪ್ಪಿಸಲಾಯಿತು.











Click it and Unblock the Notifications