ಚುನಾವಣೆ ನಂತರ ಶ್ರೀರಾಮ ಮತ್ತೆ ಬಿಜೆಪಿ ಮಡಿಲಿಗೆ

'ಅಮಾನತು ಆದೇಶ ತಮ್ಮ ಕೈಗೆ ಇನ್ನೂ ತಲುಪಿಲ್ಲ. ಶ್ರೀರಾಮುಲು ಅವರಿಗೆ ಬೆಂಬಲ ನೀಡಿರುವ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಈ ಮಧ್ಯೆ, ಚುನಾವಣೆಯ ನಂತರ ಶ್ರೀರಾಮುಲು ಅವರನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆ ಮಾಡುವುದಕ್ಕೆ ಪ್ರಯತ್ನಿಸುವೆ' ಎಂದು ಶ್ರೀರಾಮುಲು ಅವರ ಕಟ್ಟಾಳು, ವಿಧಾನ ಪರಿಷತ್ ಸದಸ್ಯ ಮೃತ್ಯುಂಜಯ ಜಿನಗಾ ಹೇಳಿದ್ದಾರೆ.
'ಅನಿವಾರ್ಯ ಪರಿಸ್ಥಿತಿಯಿಂದಾಗಿ ಎದುರಾಗಿರುವ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಬೇಡ ಎಂದು ವರಿಷ್ಠರಿಗೆ ಮುಂಚೆಯೇ ಮನವಿ ಮಾಡಿಕೊಂಡಿದ್ದೆವು. ಆದರೂ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಶ್ರೀರಾಮುಲು ಅವರೇ ಪಕ್ಷಕ್ಕೆ ಮರುಸೇರ್ಪಡೆ ಆಗುವ ಮೂಲಕ ಪ್ರಕರಣ ಸುಖಾಂತ್ಯ ಕಾಣಲಿದೆ ಎಂಬ ವಿಶ್ವಾಸವಿದೆ' ಎಂದು ಅವರು ಹೇಳಿದ್ದಾರೆ.
ಆದರೆ ವಿಶ್ವಾಸ ಎಂಬ ಪದಕ್ಕೆ ಜಾಗವೇ ಇಲ್ಲ. ಸುಖಾಂತ್ಯದ ಬಗ್ಗೆ ನಂಬಿಕೆ ಇಲ್ಲ. ಜಿನಗಾ ಈ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ಮತದಾರರನ್ನು ಗೊಂದಲಕ್ಕೆ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಪಕ್ಷದ ನಿರ್ಧಾರ ಅಚಲ. ಶ್ರೀರಾಮುಲು ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದು ಕನಸಿನ ಮಾತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ












Click it and Unblock the Notifications