ರೆಡ್ಡಿ ಸೋದರರು ಬಿಜೆಪಿಗೆ ಮರಳಿದರೆ ಟಪಾಲ್ ಗತಿಯೇನು?

ಬಿಜೆಪಿ ಸೇರ್ಪಡೆಗೊಂಡ ನಂತರ ಮಾತನಾಡಿದ ಟಪಾಲ್ ಗಣೇಶ್, ರೆಡ್ಡಿಗಳು ಮತ್ತೆ ಬಿಜೆಪಿಯಲ್ಲೇ ಮುಂದುವರಿಯುವುದಾದರೆ ತಮ್ಮ ನಿಲುವು ಬೇರೆಯೇ ಆಗಲಿದ್ದು, ನಂತರ ಈ ಕುರಿತು ನೋಡೋಣ ಎಂದು ಮಾರ್ಮಿಕವಾಗಿ ನುಡಿದರು. ಇದು ಬಿಜೆಪಿಗೆ ಎಚ್ಚರಿಕೆಯೂ ಹೌದು.
ಇದೇ ವೇಳೆ. ಮುಖ್ಯಮಂತ್ರಿ ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಈಶ್ವರಪ್ಪ ಸಮ್ಮುಖದಲ್ಲಿ ಚರ್ಚಿಸಿದ ನಂತರ ಬಿಜೆಪಿ ಸೇರ್ಪಡೆಗೊಂಡಿದ್ದು, ಶೀಘ್ರದಲ್ಲಿಯೇ ಸಕ್ರಮ ಗಣಿಗಾರಿಕೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಟಪಾಲ್ ಗಣೇಶ್ ತಿಳಿಸಿದರು.
ಜಿಲ್ಲೆಯಲ್ಲಿ ಗಣಿ ಉದ್ಯಮ ಸ್ಥಗಿತಗೊಂಡಿದ್ದರಿಂದ ಲಕ್ಷಾಂತರ ಕಾರ್ಮಿಕರು ಕೆಲಸವಿಲ್ಲದೇ ಬೀದಿಪಾಲಾಗಿ ಬದುಕು ಅತಂತ್ರಗೊಂಡಿದ್ದರಿಂದ ಅವರು ಸುಪ್ರೀಂ ಕೋರ್ಟಿನಲ್ಲಿ ತೆರವುಗೊಳಿಸಿಕೊಡುವ ಮನಸ್ಸು ಮಾಡಿದ್ದಾರೆ ಎಂದು ಹೇಳಿದರು.












Click it and Unblock the Notifications