ಭೀಕರ ಬಸ್ ಅಪಘಾತ, 15 ಜನ ಸಜೀವ ದಹನ
ನಾಗಪುರ,
ನ.28: ನಾಗಪುರ- ಔರಂಗಾಬಾದ್ ಹೆದ್ದಾರಿಯಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರದ ಬಸ್ ಸುಟ್ಟು ಕರಕಲಾಗಿದೆ. ಸುಮಾರು 15 ಜನ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. id="toptextpromo">ಸೋಮವಾರ(ನ.28)
ಮುಂಜಾನೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ವೇಗವಾಗಿ ಬರುತ್ತಿದ್ದ ಎರಡು ಬಸ್ ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡಿದೆ. ಈ ಘಟನೆಯಲ್ಲಿ ಸುಮಾರು 15 ಜನರು ಸುಟ್ಟು ಹೋಗಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಸುಮಾರು
57 ಜನರು ಗಾಯಗೊಂಡಿದ್ದು, ಅದರಲ್ಲಿ 37 ಜನರ ಪರಿಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಆಸ್ಪತ್ರೆಗಳಲ್ಲಿ ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕದಳಗಳು ಬೀಡು ಬಿಟ್ಟಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಮಗ್ನವಾಗಿದೆ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.











Click it and Unblock the Notifications