ಶ್ರೀರಾಮುಲು ಕಥೆ ಮುಗಿಯಿತು, ಶೆಟ್ಟರ್ ಅಭಿಮತ

ಬಿಜೆಪಿ ಅಭ್ಯರ್ಥಿ ಗಾದಿ ಲಿಂಗಪ್ಪ ಅವರು ಹೆಚ್ಚಿನ ಬಹುಮತದೊಂದಿಗೆ ವಿಜಯಿಯಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ತೊರೆದಿರುವ ನಾಯಕರು ಸ್ವಂತ ಪಕ್ಷ ಕಟ್ಟಿ ತಮ್ಮ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಹಿಂದೆ ಕೂಡಾ ಈ ರೀತಿ ಪ್ರಾದೇಶಿಕ ಪಕ್ಷ ಕಟ್ಟುವ ಪ್ರಯತ್ನಗಳು ನಡೆದು ವಿಫಲವಾಗಿರುವ ಉದಾಹರಣೆಗಳಿವೆ.
ಬಳ್ಳಾರಿ ಉಪ ಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಡಿವಿ ಸದಾನಂದ ಗೌಡರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಐದು ವರ್ಷಗಳ ಆಡಳಿತವನ್ನು ಪೂರ್ಣಗೊಳಿಸಲಿದೆ ಎಂದು ಶೆಟ್ಟರ್ ಹೇಳಿದರು.












Click it and Unblock the Notifications