ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಟ್ಕಳ್‌ ತಲೆಗೆ 15 ಲಕ್ಷ; ಉತ್ತರ ಕನ್ನಡಕ್ಕೆ NIA ತಂಡ

By Srinath
|
Google Oneindia Kannada News

delhi-police-announce-rs15-lakh-reward-bhatkal
ಭಟ್ಕಳ (ಉತ್ತರ ಕನ್ನಡ ಜಿಲ್ಲೆ), ಡಿ.2: ರಾಜಧಾನಿಯಲ್ಲಿ ಇತ್ತೀಚೆಗೆ ಬಂಧಿತರಾದ ಇಂಡಿಯನ್‌ ಮುಜಾಹಿದಿನ್‌ ಸಂಘಟನೆಯ 6 ಉಗ್ರರನ್ನು ವಿಚಾರಣೆಗೆ ಗುರಿಪಡಿಸಲಾಗಿದ್ದು, ಕರ್ನಾಟಕದ ಮಟ್ಟಿಗೆ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಯಾಸೀನ್‌ ಭಟ್ಕಳ್‌ ಅಂದುಕೊಂಡಿದ್ದಕ್ಕಿಂತ ಹೆಚ್ಚು ಅಪಾಯಕಾರಿ ಎಂಬುದು ದೆಹಲಿ ಪೊಲೀಸರಿಗೆ ಅರಿವಿಗೆ ಬಂದಿದೆ.

ಇದರಿಂದಾಗಿ ಮುಜಾಹಿದಿನ್‌ ಉಗ್ರರು ನೀಡಿದ ಮಾಹಿತಿ ಮೇರೆಗೆ ಭಟ್ಕಳ್‌ ತಲೆಗೆ ಘೋಷಿಸಲಾಗಿದ್ದ ಬಹುಮಾನದ ಮೊತ್ತವನ್ನು ಏರಿಸಲಾಗಿದೆ. ಈ ಮೊದಲು ಆತನ ತಲೆಗೆ 3 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ದೇಶದ ವಿವಿಧ ಕಡೆ ನಡೆದ ಸ್ಫೋಟ ಪ್ರಕರಣಗಳ ರೂವಾರಿ, ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಯಾಸೀನ್‌ ಭಟ್ಕಳ್‌ ಕುರಿತು ಮಾಹಿತಿ ನೀಡಿದವರಿಗೆ 15 ಲಕ್ಷ ರೂ. ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ.

ಈ ಮಧ್ಯೆ, ದೆಹಲಿ ಪೊಲೀಸರ ಜತೆ ಸಂಪರ್ಕ ಸಾಧಿಸಲಾಗಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಖಲು ಎಸಿಪಿ ನ್ಯಾಮಗೌಡ ನೇತೃತ್ವದ ತಂಡ ದೆಹಲಿಗೆ ಹೋಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ತಿಳಿಸಿದ್ದಾರೆ. ಇನ್ನು, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು (NIA) ಗುರುವಾರ ಭಟ್ಕಳ್ ಗೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಯಾಸಿನ್‌ (27) ದೆಹಲಿಯ ಮೂರು ಸ್ಫೋಟ ಪ್ರಕರಣಗಳು ಸೇರಿದಂತೆ ದೇಶವ ವಿವಿಧೆಡೆ ನಡೆದ ಸ್ಫೋಟ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಈತ ಪಾಕಿಸ್ತಾನ ಅಥವಾ ಬಾಂಗ್ಲಾದೇಶಕ್ಕೆ ಪರಾರಿಯಾಗಿರಬಹುದೆಂಬ ಶಂಕೆ ಇದೆ. ಭಟ್ಕಳ್‌ ಪುಣೆಯ ಜರ್ಮನ್‌ ಬೇಕರಿ ಸ್ಫೋಟ ನಡೆಸಬೇಕಾದ ಸ್ಥಳವನ್ನು ಪರಿಶೀಲನೆ ನಡೆಸಿದ್ದ ಎನ್ನಲಾಗಿದೆ.

English summary
Delhi Police announced a reward of R15 lakh on Thursday for anyone providing information on Bhatkal. IM operative Yasin Bhatkal, 27, is a resident of Bhatkal in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X