ಪದ್ಮನಾಭಸ್ವಾಮಿಗೆ 'ಅನಂತ' ಭದ್ರತಾ ವ್ಯವಸ್ಥೆ

ಕ್ಷೇತ್ರದ ನೆಲಮಾಳಿಗೆಯ ಆರು ರಹಸ್ಯ ಕೊಠಡಿಗಳ ಪೈಕಿ ಐದರಲ್ಲಿ ಜಗತ್ತು ನಿಬ್ಬೆರಗಾಗುವಷ್ಟು ಸಂಪತ್ತು ಪತ್ತೆಯಾದ ಬಳಿಕ ಸಂಪತ್ತಿನ ಕಾವಲಿನ ಸಮಸ್ಯೆ ತಲೆದೋರಿದೆ. ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ಮಾಡಿರುವ ಅತ್ಯಾಧುನಿಕ ಭದ್ರತಾ ವ್ಯವಸ್ಥೆಯನ್ನು ಮುಖ್ಯಮಂತ್ರಿ ಉಮ್ಮನ್ ಚಾಂಡಿ ಉದ್ಘಾಟಿಸಿದ್ದಾರೆ.
ಕ್ಷೇತ್ರಕ್ಕೆ ಲೋಪ ರಹಿತ ಭದ್ರತೆಯನ್ನು ಒದಗಿಸುವ ಕುರಿತು ಸರ್ವೋಚ್ಚ ನ್ಯಾಯಾಲಯಕ್ಕೆ ನೀಡಿರುವ ಭರವಸೆಯನ್ನು ರಾಜ್ಯ ಹಂತ ಹಂತವಾಗಿ ಕಾರ್ಯಗತಗೊಳಿಸುತ್ತಿದೆ ಎಂದು ಚಾಂಡಿ ಈ ಸಂದರ್ಭದಲ್ಲಿ ಹೇಳಿದರು. ದೇವಸ್ಥಾನದ ಸುತ್ತ 24 ಗಂಟೆಯೂ ಕಣ್ಗಾವಲು ಇಡುವ ಸಲುವಾಗಿ ಬಹು ಹಂತದ ಸಿಸಿಟಿವಿ ಅಳವಡಿಸುವ ಕೆಲಸ ಬಹುತೇಕ ಪೂರ್ಣಗೊಂಡಿದೆ. ಎಲ್ಲ ಆಯಕಟ್ಟಿನ ಜಾಗದಲ್ಲಿ 58 ಸಿಸಿಟಿವಿಗಳನ್ನು ಅಳವಡಿಸಲು ಉದ್ದೇಶಿಸಲಾಗಿದೆ.
ವೈಜ್ಞಾನಿಕ ಭದ್ರತಾ ವ್ಯವಸ್ಥೆಯನ್ನು ಅಳವಡಿಸಿರುವ ಸರಕಾರಿ ಸ್ವಾಮ್ಯದ ಕೆಲ್ಟ್ರಾನ್ ಸಂಸ್ಥೆ ಪೊಲೀಸರಿಗೆ ಅದನ್ನು ನಿಭಾಯಿಸುವ ತರಬೇತಿ ನೀಡುತ್ತಿದೆ. ಉದ್ಘಾಟನಾ ಸಮಾರಂಭದಲ್ಲಿ ಕ್ಷೇತ್ರದ ಆಡಳಿತವನ್ನು ನೋಡಿಕೊಳ್ಳುತ್ತಿರುವ ತಿರುವಾಂಕೂರು ರಾಜಮನೆತನದ ಉತ್ರಾಡಂ ತಿರುನಾಳ್ ಮಾರ್ತಾಂಡ ವರ್ಮ, ಡಿಜಿಪಿ ಜೇಕಬ್ ಪುನ್ನೋಸ್ ಮತ್ತಿತರರು ಉಪಸ್ಥಿತರಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications