ಗಣಿ ಅಕ್ರಮ : ರೆಡ್ಡಿಗಳ ವಿರುದ್ಧ ಸಿಬಿಐ ಚಾರ್ಜ್ ಶೀಟ್

CBI files charge sheet against Janardhana Reddy and others
ಹೈದರಾಬಾದ್, ಡಿ. 3 : ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಓಬಳಾಪುರಂ ಮೈನಿಂಗ್ ಕಂಪನಿಯ ಮಾಲಿಕ, ಕರ್ನಾಟಕದ ಮಾಜಿ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಮೂವರು ಮತ್ತು ಕಂಪನಿಯ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಸಿಬಿಐ ಶನಿವಾರ ಆರೋಪ ಪಟ್ಟಿ ಸಲ್ಲಿಸಿದೆ.

ಜನಾರ್ದನ ರೆಡ್ಡಿ ಹೊರತುಪಡಿಸಿ, ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ ರೆಡ್ಡಿ, ಆಂಧ್ರದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಾಜಿ ನಿರ್ದೇಶಕ ವಿ.ಡಿ. ರಾಜಗೋಪಾಲ್ ಮತ್ತು ಓಬಳಾಪುರಂ ಕಂಪನಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಸಿಬಿಐ ಜಂಟಿ ನಿರ್ದೇಶಕ (ಹೈದರಾಬಾದ್) ವಿ.ವಿ. ಲಕ್ಷ್ಮಿ ನಾರಾಯಣ ಅವರು ತಿಳಿಸಿದರು.

ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವ ಜನಾರ್ದನ ರೆಡ್ಡಿ, ಶ್ರೀನಿವಾಸ ರೆಡ್ಡಿಯವರನ್ನು ಬಳ್ಳಾರಿಯಲ್ಲಿ ಸೆಪ್ಟೆಂಬರ್ 5ರಂದು ಬಂಧಿಸಲಾಗಿತ್ತು. ನಂತರ ರಾಜಗೋಪಾಲ್ ಅವರನ್ನೂ ಸಿಬಿಐ ಬಂಧಿಸಿತ್ತು. ಮೂವರೂ ಈಗ ಚಂಚಲಗುಡ ಜೈಲಿನಲ್ಲಿ ಕೈದಿಗಗಳಾಗಿದ್ದಾರೆ.

ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ (ಸಂಚು), 409 (ಸಾರ್ವಜನಿಕ ನಂಬಿಕೆ ದ್ರೋಹ), 420 (ಮೋಸ), 468 (ಮೋಸ ಮಾಡಲು ನಕಲಿ ಸಹಿ) ಮತ್ತು 471 ಸೆಕ್ಷನ್ (ನಕಲಿ ದಾಖಲೆಯನ್ನು ಬಳಸಿದ್ದು) ಅಡಿಯಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+