ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ಸಿಎಂಗಳ ವಿರುದ್ಧ ತನಿಖೆಗೆ ಕೋರ್ಟ್ ಅಸ್ತು

By Prasad
|
Google Oneindia Kannada News

Lokayukta enquiry against former CMs
ಬೆಂಗಳೂರು, ಡಿ. 3 : ಅಕ್ರಮ ಗಣಿಗಾರಿಕೆಯ ಸುಳಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್ಎಂ ಕೃಷ್ಣ, ಧರ್ಮ ಸಿಂಗ್ ಮತ್ತು ಎಚ್ ಡಿ ಕುಮಾರಸ್ವಾಮಿ ಅವರು ಸಿಲುಕಿಕೊಂಡಿದ್ದಾರೆ. ಮೂವರ ವಿರುದ್ಧ ಲೋಕಾಯುಕ್ತ ತನಿಖೆ ನಡೆಸಬೇಕೆಂದು ಲೋಕಾಯುಕ್ತ ವಿಶೇಷ ಕೋರ್ಟ್ ಆದೇಶಿಸಿ ಮಹತ್ವದ ಆದೇಶ ಹೊರಡಿಸಿದೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 156(3) ಅಡಿಯಲ್ಲಿ ಎಡಿಜಿಪಿ ಸೂರ್ಯನಾರಾಯಣ ರಾವ್ ಅವರ ನೇತೃತ್ವದಲ್ಲಿ ತನಿಖೆ ನಡೆಸಿ ಜನೆವರಿ 6ರೊಳಗೆ ವರದಿ ಸಲ್ಲಿಸಬೇಕೆಂದು ನ್ಯಾ.ಎನ್ ಕೆ ಸುಧೀಂದ್ರ ರಾವ್ ಅವರು ಆದೇಶಿಸಿದ್ದಾರೆ. ಜೊತೆಗೆ 8 ಅಧಿಕಾರಗಳ ವಿರುದ್ಧವೂ ತನಿಖೆ ನಡೆಸಬೇಕೆಂದು ನ್ಯಾಯಾಧೀಶರು ಹೇಳಿದ್ದಾರೆ.

ಅವರು ವಿರುದ್ಧ ಲೋಕಾಯುಕ್ತ ತನಿಖೆ ನಡೆಸಬೇಕೆಂದು ಟಿಜೆ ಅಬ್ರಹಾಂ ಎಂಬುವವರು ದೂರು ಸಲ್ಲಿಸಿದ್ದರು. ಅವರು ಸಲ್ಲಿಸಿರುವ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ ತನಿಖೆಗೆ ನ್ಯಾ. ಸುಧೀಂದ್ರರಾವ್ ಅಸ್ತು ಎಂದಿದ್ದಾರೆ.

ಕೃಷ್ಣ ಅವರ ಅವಧಿಯಲ್ಲಿ ಕೇವಲ 15 ದಿನಗಳ ಅವಧಿಯಲ್ಲಿ 6 ಸಾವಿರ ಎಕರೆ ಪ್ರದೇಶದಲ್ಲಿ 84 ಗಣಿ ಪರವಾನಗಿ ನೀಡಲಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ ಲೋಕಾಯುಕ್ತ ವರದಿಯಲ್ಲಿ ಅವರ ಹೆಸರು ಇಲ್ಲದಿದ್ದರೂ, ಗಣಿ ಮತ್ತು ಭೂಗರ್ಭ ಇಲಾಖೆಯಿಂದ ಪಡೆದಿರುವ ದಾಖಲೆಗಳ ಪ್ರಕಾರ ಅಕ್ರಮ ಗಣಿಗಾರಿಕೆಯಲ್ಲಿ ಅವರು ಭಾಗಿಯಾಗಿರುವುದು ಸಾಬೀತಾಗಿದೆ ಎಂದು ತಿಳಿಸಲಾಗಿತ್ತು.

ಧರಂ ಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಅಧಿಕಾರ ದುರುಪಯೋಗಪಡಿಸಿ ಅಕ್ರಮ ಗಣಿಗಾರಿಕೆಗೆ ಮತ್ತು ಅಕ್ರಮ ಅದಿರು ಸಾಗಾಣಿಕೆಗೆ ಪರವಾನಗಿ ನೀಡಲಾಗಿತ್ತು. ಇದರಿಂದ ರಾಜ್ಯದ ಬೊಕ್ಕಸಕ್ಕೆ ಅಂದಾಜು 24 ಕೋಟಿ ರು. ನಷ್ಟ ಸಂಭವಿಸಿದೆ. ಆ ಹಣವನ್ನು ಅವರಿಂದ ಕೀಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನು, ಕುಮಾರಸ್ವಾಮಿ ಅವರ ಹೆಸರು ಅಕ್ರಮ ಗಣಿಗಾರಿಕೆ ವರದಿಯಲ್ಲಿ ನಮೂದಿಸಲಾಗಿದೆ. ಸಾಯಿ ವೆಂಕಟೇಶ್ವರ ಕಂಪನಿ ಮತ್ತು ಜಂತಕಲ್ ಮೈನಿಂಗ್ ಕಂಪನಿಗಳಿಗೆ ಗಣಿಗಾರಿಕೆ ಮತ್ತು ಸಾಗಾಣಿಕೆಗೆ ಪರವಾನಗಿ ನೀಡಿದ್ದು ಅವರ ಅಧೀನದಲ್ಲಿದ್ದ ಅಧಿಕಾರಿಗಳು ನಡೆಸಿರುವ ಪತ್ರ ವ್ಯವಹಾರದಿಂದಲೇ ಸಾಬೀತಾಗಿದೆ ಎಂದು ಅಬ್ರಹಾಂ ದೂರಿನಲ್ಲಿ ಹೇಳಿದ್ದು, ಅವರ ವಿರುದ್ಧವೂ ತನಿಖೆ ನಡೆಸಬೇಕೆಂದು ಕೋರಿದ್ದಾರೆ.

English summary
Lokayukta special court has ordered enquiry against former CMs of Karnataka SM Krishna, Dharam Singh and HD Kumaraswamy in illegal mining complaint filed against them. Judge Sudhindra Rao has ordered ADGP Suryanarayana Rao to submit report by January 6.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X