ಮತ್ತೆ ಅಕ್ರಮ ಗಣಿ ತನಿಖೆ: ತೊಂದರೆಯಿಲ್ಲ ಅಂದ ಕುಮಾರಸ್ವಾಮಿ

'ನ್ಯಾಯಾಲಯದ ಈ ಆದೇಶದ ಬಗ್ಗೆ ನಾನು ಚರ್ಚಿಸುವುದಿಲ್ಲ. ಏಕೆಂದರೆ, ಇದೇ ರೀತಿಯ ಆರೋಪಗಳ ಬಗ್ಗೆ ಈ ಹಿಂದೆ ಕೂಡ ಲೋಕಾಯುಕ್ತ ಕೋರ್ಟ್‌ನಲ್ಲಿ ನನ್ನ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ಹೀಗಿರುವಾಗ, ನ್ಯಾಯಾಲಯದಲ್ಲಿರುವ ಪ್ರಕರಣಗಳ ಬಗ್ಗೆ ಏನೂ ಪ್ರತಿಕ್ರಿಯಿಸುವುದಿಲ್ಲ. ಆದರೆ, ಇಂಥ ದೂರು ಅಥವಾ ತನಿಖೆಯಿಂದ ತಮ್ಮ ರಾಜಕೀಯ ಭವಿಷ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ' ಎಂದು ಅವರು ಮಾರ್ಮಿಕವಾಗಿ ಹೇಳಿದ್ದಾರೆ.
ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ, ಮಾಜಿ ಮುಖ್ಯಮಂತ್ರಿಗಳಾದ ಧರಂಸಿಂಗ್ ಹಾಗೂ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಅಕ್ರಮ ಗಣಿ ಆರೋಪಗಳ ಖಾಸಗಿ ದೂರಿನ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ಕೋರ್ಟ್ ಲೋಕಾಯುಕ್ತ ಎಡಿಜಿಪಿಗೆ ಆದೇಶಿಸಿದೆ.
ಈ ಮೂವರೂ ಮಾಜಿ ಮುಖ್ಯಮಂತ್ರಿಗಳು ಮತ್ತು 11 ಅಧಿಕಾರಿಗಳು ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟವುಂಟು ಮಾಡಿದ್ದಾರೆ ಎಂದು ಆರೋಪಿಸಿ ಅಬ್ರಹಾಂ ಟಿ. ಜೋಸೆಫ್ ಎಂಬವರು ಡಿ. 1ರಂದು ಖಾಸಗಿ ದೂರು ಸಲ್ಲಿಸಿದ್ದರು.












Click it and Unblock the Notifications