ಕುಕ್ಕೆ ಸುಬ್ರಮಣ್ಯದಲ್ಲಿ ಸ್ವಯಂ ಘೋಷಿತ ಬಂದ್

ಸುಬ್ರಹ್ಮಣ್ಯ ಕ್ಷೇತ್ರದ ಎಲ್ಲಾ ಅಂಗಡಿ ಮುಗ್ಗಟ್ಟುಗಳು ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿದೆ. ಸಾರ್ವಜನಿಕರು ಸ್ವಯಂ ಪ್ರೇರಿತ ಬಂದ್ ನಡೆಸುತ್ತಿದ್ದು, ಶಾಂತಿಯುತ ವಾತಾವರಣವಿದೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.
ಶುಕ್ರವಾರ ಸಂಜೆ ದೇವಳದ ಛತ್ರದಲ್ಲಿ ನಡೆದ ಸಭೆಯಲ್ಲಿ ಬಂದ್ ನಡೆಸುವ ತೀರ್ಮಾನ ಕೈಗೊಳ್ಳಲಾಗಿತ್ತು. ದಲಿತ ಮುಖಂಡರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ದೇಗುಲದ ಸಿಬ್ಬಂದಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಜಿಲ್ಲಾಡಳಿತ ಆರೋಪಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು.
ಆದರೆ, ದೇಗುಲದ ಆಡಳಿತ ಮಂಡಳಿ ಒತ್ತಡದಿಂದ ಆದೇಶವನ್ನು ಹಿಂಪಡೆಯಲಾಗಿತ್ತು. ನಂತರ ನಡೆದ ಸಭೆಯಲ್ಲಿ ಬಂದ್ ನಡೆಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಬಂದ್ ಆಚರಣೆ ಬಗ್ಗೆ ತಿಳಿಯದ ಅನೇಕ ಭಕ್ತಾದಿಗಳು ಉಳಿದುಕೊಳ್ಳಲು ಛತ್ರ ಸಿಗದೆ ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.












Click it and Unblock the Notifications