ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪಗೆ ಸುಪ್ರೀಂ ನಿರಾಳ; ಬಾಷಾ ಅರ್ಜಿ ವಜಾ

By Srinath
|
Google Oneindia Kannada News

bail-to-bsy-sc-rejects-basha-appeal
ನವದೆಹಲಿ, ನ.29: ಭೂ ಹಗರಣದಲ್ಲಿ ಜೈಲುಪಾಲಾಗಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಜಾಮೀನು ನೀಡಿರುವುದು ಪ್ರಶ್ನಿಸಿ ಸಿರಾಜಿನ್ ಬಾಷಾ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ನಲ್ಲಿ ಸೋಮವಾರ ವಜಾಗೊಳಿಸಿದೆ. ಇದರಿಂದ ಯಡಿಯೂರಪ್ಪ ಸಂಪೂರ್ಣವಾಗಿ ನಿರಾಳರಾಗಿದ್ದು, ಸದ್ಯಕ್ಕೆ ಜೈಲು ಕಂಟಕದಿಂದ ಪಾರಾಗಿದ್ದಾರೆ.

ಸಿರಾಜಿನ್ ಬಾಷಾ ಪರ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಗೋಪಾಲ ಸುಬ್ರಮಣ್ಯನ್ ವಾದ ಮಂಡಿಸಿದರು. ವಾದವನ್ನು ಆಲಿಸಿದ ನ್ಯಾಯಾಲಯ ಕರ್ನಾಟಕ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಜಾಮೀನು ನೀಡಿರುವುದು ಸರಿಯಾಗಿದೆ ಎಂದು ಸ್ಪಷ್ಟವಾಗಿ ಹೇಳುತ್ತಾ, ಬಾಷಾ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿತು. ಇದರಿಂದ ಬಾಷಾ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ.

ಬೆಂಗಳೂರು ಲೋಕಾಯುಕ್ತ ನ್ಯಾಯಾಲಯ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರು ಭಾಗಿಯಾಗಿದ್ದಾರೆ ಎನ್ನಲಾದ ಭೂ ಹಗರಣ ಕುರಿತು ವಿಚಾರಣೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಬಂಧಿತರಾಗಿ 24 ದಿನ ಸೆರೆವಾಸ ಅನುಭವಿಸಿದ ಮಾಜಿ ಮುಖ್ಯಮಂತ್ರಿ ಹೈಕೋರ್ಟ್ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ.

English summary
The Supreme Court on Monday has squashed the Special Leave Petition (SLP) filed in challenging the bail granted by the High Court to former chief minister B S Yeddyurappa in a private complaint.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X