ಉಗ್ರರ ಭೀತಿ: ಕೆಎಸ್ಆರ್ ಟಿಸಿ ಬಸ್ ಗೆ ಬಂತು ಸಿಸಿಟಿವಿ

KSRTC Rajahamsa bus
ಚಾಮರಾಜನಗರ, ಡಿ.6: ಕರ್ನಾಟಕದಲ್ಲಿ ಪ್ರಮುಖ ಸ್ಥಳಗಳ ಮೇಲೆ ಉಗ್ರರ ದಾಳಿ ಶಂಕೆ ವ್ಯಕ್ತವಾಗಿರುವುದರಿಂದ ಅಂತಾರಾಜ್ಯ ಸಂಪರ್ಕವಿರುವ ಕೆಎಸ್ಸಾರ್ಟಿಸಿ ಬಸ್‌ಗಳಿಗೆ ಸಿ.ಸಿ. ಕ್ಯಾಮರಾ ಅಳವಡಿಸುವ ಚಿಂತನೆ ನಡೆದಿದೆ ಎಂದು ಕೆಎಸ್ಸಾರ್ಟಿಸಿ ಸಂಸ್ಥೆ ಹೇಳಿದೆ.

ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರ ವಿಭಾಗೀಯ ಕಚೇರಿಯಲ್ಲಿ ಈ ಸಂಬಂಧ ಉನ್ನತ ಅಧಿಕಾರಿಗಳು ಸಭೆ ನಡೆಸಿ, ನೆರೆ ರಾಜ್ಯಗಳಿಗೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್‌ಗಳಿಗೆ ಸಿ.ಸಿ. ಕ್ಯಾಮರಾ ಅಳವಡಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ.

ಕರ್ನಾಟಕ-ತಮಿಳುನಾಡು-ಕೇರಳ ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ ಚಾಮರಾಜನಗರ ಜಿಲ್ಲೆಯ ಬಸ್ ಗಳಿಗೆ ಸಿಸಿ ಕ್ಯಾಮೆರಾ ಅಳವಡಿಸುವುದರಿಂದ ಪ್ರಯಾಣಿಕರ ಮೇಲೆ ನಿಗಾ ಇಡಲು ಸಹಕಾರಿಯಾಗುತ್ತದೆ.

ಉಗ್ರಗಾಮಿಗಳ ನುಸುಳುವಿಕೆ ಮುನ್ಸೂಚನೆ ಅಲ್ಲದೆ ಅಕ್ರಮ ಚಟುವಟಿಕೆಗಳಿಗೂ ಕಡಿವಾಣ ಹಾಕಬಹುದಾಗಿದೆ. ಈ ಬಗ್ಗೆ ಪ್ರಸ್ತಾವನೆಯನ್ನು ಸಾರಿಗೆ ಸಚಿವ ಆರ್ ಅಶೋಕ್ ಅವರಿಗೆ ಕಳುಹಿಸಲಾಗಿದೆ. ಸಾರಿಗೆ ಸಚಿವಾಲಯದಿಂದ ಒಪ್ಪಿಗೆ ಸಿಕ್ಕ ನಂತರ ಈ ಯೋಜನೆ ಕಾರ್ಯಗತವಾಗಲಿದೆ ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+