ಡಿ.11: ಫ್ರೀಡಂ ಪಾರ್ಕ್ ನಲ್ಲಿ ಅಣ್ಣಾ ಹಜಾರೆ ಸತ್ಯಾಗ್ರಹ

Anna Hazare
ಬೆಂಗಳೂರು, ಡಿ.8: ಭ್ರಷ್ಟಾಚಾರ ವಿರುದ್ಧ ಸಮರ ಸಾರಿರುವ ಸಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಡಿ.11ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ.

'ನಗರದ ಫ್ರೀಡಂ ಪಾರ್ಕ್ ನಲ್ಲಿ ಡಿ.11ರಂದು ಅಣ್ಣಾ ಜೀ ಅವರು ಒಂದು ದಿನದ ಮಟ್ಟಿಗೆ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ. ಜನಲೋಕಪಾಲ ಮಸೂದೆ ಮಂಡನೆಗೆ ಒತ್ತಾಯಿಸುತ್ತಿರುವ ಭ್ರಷ್ಟಾಚಾರ ವಿರೋಧಿ ಹೋರಾಟಗಾರರು ಇನ್ನೂ ಒಗ್ಗಟ್ಟಾಗಿದ್ದೇವೆ ಎಂದು ಯುಪಿಎ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕಾಗಿದೆ' ಎಂದು ಕಾರ್ಯಕ್ರಮದ ಆಯೋಜಕರು ಹೇಳಿದ್ದಾರೆ.

ದೇಶದ ವಿವಿಧ ಕೇಂದ್ರಗಳಲ್ಲಿ ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ವಿಭಾಗದ ಈ ಕಾರ್ಯಕ್ರಮದಲ್ಲಿ ನ್ಯಾ. ಸಂತೋಷ್ ಹೆಗ್ಡೆ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸುವ ಸಾಧ್ಯತೆಯಿದೆ.

ಇಡೀ ದೇಶದಲ್ಲಿ ನಡೆದ ಭ್ರಷ್ಟಾಚಾರ ವಿರುದ್ದದ ಹೋರಾಟದಲ್ಲಿ ಬೆಂಗಳೂರಿನಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ರಸ್ತೆಗಿಳಿದು ಹೋರಾಟ ನಡೆಸಿದ್ದು ಎಂದು ದಾಖಲೆಗಳು ಹೇಳುತ್ತದೆ. ಭಾನುವಾರದಂದು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಭ್ರಷ್ಟಾಚಾರ ವಿರೋಧಿಸುವ ನಾಗರೀಕರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಕೋರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+