ನಾಳೆ ಯಾರೂ ಸೋನಿಯಾಜೀ ಮನೆಗೆ ಹೋಗ್ಬೇಡಿ!

ಡಿ.9ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು 66 ವಸಂತಕ್ಕೆ ಕಾಲಿರಿಸುತ್ತಿದ್ದಾರೆ. ಆದರೆ, ಈ ಬಾರಿ ತಮ್ಮ ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿದ್ದಾರೆ ಎಂದು ಪಕ್ಷದ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಹೇಳಿದ್ದಾರೆ.
ಹುಟ್ಟುಹಬ್ಬದ ದಿನ ದೂರದೂರದಿಂದ ಭಾರಿ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಗೆ ಬಂದು ಸೇರುತ್ತಾರೆ. ಕಳೆದ ವರ್ಷ ಕೂಡಾ ಹುಟ್ಟುಹಬ್ಬದ ಸಂದರ್ಭ ನಂ.10, ಜನಪಥ್‌ನ ಸೋನಿಯಾ ನಿವಾಸದೆದುರು ಜಮಾಯಿಸಿ ಮೆರವಣಿಗೆ ನಡೆಸಿದ್ದರು.
ಇದರಿಂದ ಸಾರ್ವಜನಿಕರಿಗೆ ತೀವ್ರ ಅಡಚಣೆಯಾಗಿತ್ತು. ಹುಟ್ಟುಹಬ್ಬ ಆಚರಣೆ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಇಲ್ಲಿಗೆ ಬರುವ ಅಗತ್ಯವಿಲ್ಲ ಎಂದು ಜನಾರ್ದನ ದ್ವಿವೇದಿ ತಿಳಿಸಿದ್ದಾರೆ.












Click it and Unblock the Notifications