ಕೃಷ್ಣಯ್ಯ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು

ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೂರು ಕೃಷ್ಣಯ್ಯ ಶೆಟ್ಟಿ ಅವರ ವಿರುದ್ಧ ಸಿರಾಜಿನ್ ಬಾಷಾ ಸಲ್ಲಿಸಿದ್ದ 2ನೇ ದೂರಿನ ಅರ್ಜಿ ತಿರಸ್ಕಾರಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ(ಡಿ.8)ವಿಚಾರಣೆ ನಡೆಸಿದ ನ್ಯಾ.ಎಚ್ ಬಿಳ್ಳಪ್ಪ ಅವರಿದ್ದ ಏಕಸದಸ್ಯ ಪೀಠ, ಕೃಷ್ಣಯ್ಯ ಶೆಟ್ಟಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
2 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಒದಗಿಸಬೇಕು. ಸಾಕ್ಷಿಗಳನ್ನು ನಾಶಪಡಿಸುವಂತಿಲ್ಲ. ಕೋರ್ಟ್ ಅನುಮತಿ ಇಲ್ಲದೆ ವಿದೇಶಕ್ಕೆ ಹಾರುವಂತಿಲ್ಲ ಎಂದು ಹೈಕೋರ್ಟ್ ಪೀಠ ಸೂಚಿಸಿದೆ.
ಕೃಷ್ಣಯ್ಯ ಶೆಟ್ಟಿ ಅವರು ಜಾಮೀನು ಪಡೆದು ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬಂದಿದ್ದು, ಶುಕ್ರವಾರ ಮತ್ತೆ ಜೈಲಿಗೆ ಹೋಗಲಿದ್ದಾರೆ. ಆದರೆ ಈ ಬಾರಿ ಅಲ್ಲಿ ಕೈದಿಗಳಿಗೆ ಹಾಸಿಗೆ ಹೊದಿಕೆ ಮತ್ತು ಸೀರೆ ವಿತರಿಸಿದ್ದರು. ರಾಜಕೀಯ ಮುಖಂಡರಿಗೆ ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ರವಾನೆಯಾಗಿತ್ತು. ಈಗ ಯಾರಿಗೆ ಯಾವ ಪ್ರಸಾದ ಸಿಗಲಿದೆ ಕಾದು ನೋಡಬೇಕಿದೆ.












Click it and Unblock the Notifications