ಧರ್ಮ-ಕೃಷ್ಣ-ಸ್ವಾಮಿ ವಿರುದ್ಧ FIR ದಾಖಲೆ

FIR against SM Krishna, HD Kumaraswamy and Dharam Singh
ಬೆಂಗಳೂರು, ಡಿ.8: ಅಕ್ರಮ ಗಣಿಗಾರಿಕೆಯ ಸುಳಿಯಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿಗಳಾದ ಎಸ್ಎಂ ಕೃಷ್ಣ, ಧರ್ಮ ಸಿಂಗ್ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮೂವರು ಆರೋಪಿ ಸಿಎಂಗಳ ವಿರುದ್ಧ ತನಿಖೆ ನಡೆಸುವಂತೆ ಡಿ.3ರಂದು ಲೋಕಾಯುಕ್ತ ವಿಶೇಷ ಕೋರ್ಟ್ ಮಹತ್ವದ ಆದೇಶ ಹೊರಡಿಸಿತ್ತು.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 156(3) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಎಡಿಜಿಪಿ ಸೂರ್ಯನಾರಾಯಣ ರಾವ್ ಅವರ ನೇತೃತ್ವದ ತಂಡ ತನಿಖೆ ಆರಂಭಿಸಿದೆ.

ಮೂವರು ಮಾಜಿ ಮುಖ್ಯಮಂತ್ರಿಗಳ ಜೊತೆಗೆ 8 ಅಧಿಕಾರಗಳ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಜನವರಿ 6ರೊಳಗೆ ತನಿಖಾ ವರದಿಯನ್ನು ನ್ಯಾ.ಎನ್ ಕೆ ಸುಧೀಂದ್ರ ರಾವ್ ಅವರಿಗೆ ಸಲ್ಲಿಸಬೇಕಾಗುತ್ತದೆ.

ಮೂವರು ಮಾಜಿ ಸಿಎಂಗಳ ಅಧಿಕಾರ ಅವಧಿಯಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ವಿರುದ್ಧ ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ಟಿಜೆ ಅಬ್ರಹಾಂ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. ಅವರು ಸಲ್ಲಿಸಿರುವ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ ತನಿಖೆಗೆ ನ್ಯಾ. ಸುಧೀಂದ್ರರಾವ್ ಅವರು ಆದೇಶಿಸಿದ್ದರು.

ಬಂಧನ ಸಾಧ್ಯತೆ?: ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಗಳು ಹಾಗೂ ಮೂವರು ಮಾಜಿ ಸಿಎಂ ಅವರನ್ನು ಬಂಧನಕ್ಕೆ ಒಳಪಡಿಸಿ ವಿಚಾರಣೆ ನಡೆಸುವ ಅವಕಾಶ ಲೋಕಾಯುಕ್ತ ಪೊಲೀಸರಿಗೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+