ಎಫ್ಐಆರ್ ರದ್ದುಪಡಿಸಲು ಕೃಷ್ಣ ಕೋರ್ಟ್ ಮೊರೆ
ಬೆಂಗಳೂರು,
ಡಿ. 9 : ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿರುವುದನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರು ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. id="toptextpromo">ಎಫ್ಐಆರ್
ರದ್ದುಪಡಿಸಿ ತನಿಖೆಗೆ ತಡೆ ನೀಡಬೇಕೆಂದು ಕೋರಿ ಕೃಷ್ಣ ಪರ ಅಶೋಕ್ ಹಾರನಹಳ್ಳಿಯವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ನ್ಯಾಯಾಲಯ ಇನ್ನೂ ಲಿಸ್ಟ್ ಮಾಡಬೇಕಿದ್ದು, ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಟಿಜೆ ಅಬ್ರಹಾಂ ಎಂಬುವವರು ಲೋಕಾಯುಕ್ತ ಕೋರ್ಟಿಗೆ ಖಾಸಗಿ ದೂರನ್ನು ನೀಡಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಲೋಕಾಯುಕ್ತ
ನ್ಯಾಯಾಧೀಶ ಎನ್ ಕೆ ಸುಧೀಂದ್ರ ಅವರು ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಆದೇಶಿಸಿದ್ದ ಹಿನ್ನೆಲೆಯಲ್ಲಿ ಡಿ.8ರಂದು ಲೋಕಾಯುಕ್ತ ಎಡಿಜಿಪಿ ಸತ್ಯನಾರಾಯಣ ರಾವ್ ಅವರು ಕೃಷ್ಣ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಎನ್ ಧರ್ಮ ಸಿಂಗ್ ಮತ್ತು ಸಂಸದರೂ ಆಗಿರುವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.











Click it and Unblock the Notifications