ಬಿಜೆಪಿ ಸಂಧಾನ: ರಾಮುಲು ಶಾಸಕರ ಅಮಾನತು ರದ್ದು

'ಈ ವಾರಾಂತ್ಯ ಈಶ್ವರಪ್ಪ ಬಳ್ಳಾರಿಗೆ ತೆರಳಿ, ಮೂವರು ಶಾಸಕರು ಸೇರಿದಂತೆ ವಿಧಾನ ಸಭಾ ಕ್ಷೇತ್ರವಾರು ಮುಖಂಡರನ್ನು ಭೇಟಿ ಮಾಡುವ ಕಾರ್ಯಕ್ರಮವಿದೆ. ಆ ವೇಳೆ ಶಾಸಕರ ಅಮಾನತು ಆದೇಶ ರದ್ದು ಮಾಡುವ ಬಗ್ಗೆ ನಿರ್ಧಾರ ಪ್ರಕಟಿಸುವ ಸಂಭವವಿದೆ' ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬಳ್ಳಾರಿ ಜಿಲ್ಲೆಯ ಶಾಸಕರನ್ನು ಪಕ್ಷದಿಂದ ಅಮಾನತುಗೊಳಿಸಿರುವ ಆದೇಶ ರದ್ದು ಮಾಡಿದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಚಲಾಯಿಸುವ ಕೋರಿಕೆಯ ಬಗ್ಗೆ ಪರಿಶೀಲಿಸಬಹುದು ಎಂಬ ಉತ್ತರ ಆ ಶಾಸಕ ಕಡೆಯಿಂದ ಬಂದಿದೆ. ಬಿಜೆಪಿಗೂ ಇದೇ ಬೇಕಾಗಿದ್ದು, ಆ ಕಾರಣಕ್ಕಾಗಿಯೇ ಅಮಾನತು ಆದೇಶವನ್ನು ಹಿಂದಕ್ಕೆ ಪಡೆಯಲು ಪಕ್ಷ ಮುಂದಾಗಿದೆ ಎಂದು ತಿಳಿದುಬಂದಿದೆ.
ಇದರೊಂದಿಗೆ ಬಳ್ಳಾರಿ ಜಿಲ್ಲೆಯ ಶಾಸಕರಾದ ಜಿ. ಸೋಮಶೇಖರ ರೆಡ್ಡಿ, ಬಿ. ನಾಗೇಂದ್ರ, ಟಿ.ಎಚ್. ಸುರೇಶ್‌ಬಾಬು ಮತ್ತು ವಿಧಾನ ಪರಿಷತ್ ಸದಸ್ಯ ಮೃತ್ಯಂಜಯ ಜಿನಗಾ ಅವರನ್ನು ಪಕ್ಷದಿಂದ ಅಮಾನತು ಮಾಡಿರುವ ಆದೇಶವನ್ನು ಬಿಜೆಪಿ ರಾಜ್ಯ ಘಟಕ ಹಿಂದಕ್ಕೆ ಪಡೆಯುವ ಸಾಧ್ಯತೆ ಇದೆ.
ಇದೇ 22ರಂದು ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರೇ ಕಣಕ್ಕಿಳಿಯುತ್ತಿದ್ದಾರೆ.












Click it and Unblock the Notifications