ಶ್ರೀರಾಮುಲು ಸರ್ಕಾರ ಕೆಡವಲು ಸಾಧ್ಯವಿಲ್ಲ: ಶೆಟ್ಟರ್

ಚುನಾವಣೆ ಸಂಬಂಧ ಈಗಾಗಲೇ ವಿಪ್ ಜಾರಿ ಮಾಡಲಾಗಿದೆ. ವಿಪ್ ಉಲ್ಲಂಘಿಸಿ, ಪಕ್ಷದಿಂದ ಹೊರಬೀಳುವ ಧೈರ್ಯ ಮಾಡುವುದಿಲ್ಲ ಎಂಬ ನಂಬಿಕೆ ನಮಗಿದೆ. ಅಡ್ಡ ಮತದಾನದ ಸಾಧ್ಯತೆಯಿಲ್ಲ ಎಂದು ಗ್ರಾಮೀಣಾಭಿವೃದ್ದಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಭಾನುವಾರ ಇಲ್ಲಿನ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಶೆಟ್ಟರ್, ಸ್ಪೀಕರ್ ಸೇರಿದಂತೆ ನಮ್ಮ ಪಕ್ಷದಲ್ಲಿ 121 ಶಾಸಕರು ಇದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಸಿಎಂ ಸದಾನಂದ ಗೌಡರ ಗೆಲುವು ಖಚಿತ ಎಂದರು.
ಯಡಿಯೂರಪ್ಪ ಅವರು ಸದ್ಯಕ್ಕಂತೂ ಮತ್ತೆ ಮುಖ್ಯಮಂತ್ರಿಯಾಗುವ ಅವಕಾಶಗಳಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ, ಬಿಜೆಪಿಯಲ್ಲಿ ಸಣ್ಣ ಪುಟ್ಟ ಮನಸ್ತಾಪಗಳಿದ್ದರೂ ಆಂತರಿಕ ಬಿಕ್ಕಟ್ಟು ಉಲ್ಬಣವಾಗಿಲ್ಲ ಎಂದು ಶೆಟ್ಟರ್ ಹೇಳಿದರು.












Click it and Unblock the Notifications