ಕಟ್ಟಾ ನಾಯ್ಡುಗೆ ಷರತ್ತುಬದ್ಧ ಜಾಮೀನು ಮಂಜೂರು

Katta subramanya Naidu
ಬೆಂಗಳೂರು, ಡಿ.12: ಕೆಐಎಡಿಬಿ ಹಗರಣದ ಆರೋಪಿಯಾಗಿರುವ ಕಟ್ಟಾ ಸುಬ್ರಮಣ್ಯ ನಾಯ್ಡು ಹಾಗೂ ಕಟ್ಟಾ ಜಗದೀಶ್ ಮತ್ತು ಇಟಸ್ಕಾ ಎಂಡಿ ಶ್ರೀನಿವಾಸ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ, ಲೋಕಾಯುಕ್ತ ಕೋರ್ಟ್ ಆದೇಶ ಹೊರಡಿಸಿದೆ.

ಹೈಕೋರ್ಟ್ ಕಟ್ಟಾ ಅವರಿಗೆ 3 ತಿಂಗಳ ಮಧ್ಯಂತರ ಮತ್ತು ಷರತ್ತುಬದ್ಧ ಜಾಮೀನು ನೀಡಿದ್ದು, ಐದು ಲಕ್ಷ ರು. ಬಾಂಡ್ ಸಲ್ಲಿಸಬೇಕೆಂದು ಆದೇಶಿಸಿದೆ. ಲಂಡನ್ ನಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಬೇಕಿದ್ದರೆ ಲೋಕಾಯುಕ್ತ ಕೋರ್ಟ್ ಅನುಮತಿ ಪಡೆಯಬೇಕೆಂದು ತಿಳಿಸಿದೆ.

ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಟ್ಟಾ ಸುಬ್ರಮಣ್ಯ ನಾಯ್ಡು ಲಂಡನ್ ತೆರಳಬಹುದಾಗಿದೆ.

ಉಳಿದಂತೆ ಕೆಐಎಡಿಬಿ ಕಚೇರಿಗೆ ಆರೋಪಿಗಳು ಭೇಟಿ ನೀಡುವಂತಿಲ್ಲ, ಸಾಕ್ಷಿ ನಾಶ ಮಾಡುವಂತಿಲ್ಲ. 1ನೇ ಶನಿವಾರ ಹಾಗೂ 3ನೇ ಶನಿವಾರ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಕಚೇರಿಗೆ ಹಾಜರಾಗಬೇಕು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+