ಬೇಡಿಕೆ ಈಡೇರಿಸದಿದ್ದರೆ ಮುಸ್ಲಿಂರಿಂದ ಉಗ್ರ ಹೋರಾಟ

ಪಟ್ಟಣದಲ್ಲಿ ಅಂಜುಮಾನ್ ಶಾದಿಮಹಲ್‌ದಿಂದ ಕರ್ನಾಟಕ ಮುಸ್ಲಿಂ ಹೋರಾಟ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರಜಾಕ್ ಕಿಲ್ಲೇದಾರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿತು. ಮುಸ್ಲಿಂರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪಟ್ಟಣದ ಬಸ್ ನಿಲ್ದಾಣ ರೋಡ, ಶುಕ್ರವಾರ ಪ್ಯಾಟಿ, ಮಾರ್ಕೇಟ್ ರಸ್ತೆ ಮೂಲಕ ಕಂದಾಯ ಇಲಾಖೆ ಆವರಣವನ್ನು ಪ್ರವೇಶಿಸಿ, ಉಪ ವಿಭಾಗಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ, ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಮನವಿ ಪತ್ರವನ್ನು ಓದಿದ ಸಮಾಜದ ಮುಖಂಡ ಎಲ್.ಎಸ್.ಬಸೀರ ಅಹ್ಮದ, ಮುಸ್ಲಿಂ ಸಮಾಜಕ್ಕೆ ಅವಶ್ಯವಿರುವ ಬೇಡಿಕೆಗಳಿಗೆ 15 ದಿನಗಳ ಒಳಗಾಗಿ ಸ್ಪಂದಿಸದಿದ್ದಲ್ಲಿ ಕರ್ನಾಟಕ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ರಾಜ್ಯ ಸರಕಾರ ಕನಕದಾಸರ, ಮಹರ್ಷಿ ವಾಲ್ಮೀಕಿ ಜಯಂತಿ ಮಾದರಿಯಲ್ಲಿ ಟೀಪು ಸುಲ್ತಾನರ ಜನ್ಮ ದಿನದಂದು ಸರಕಾರಿ ರಜೆ ಘೋಷಿಸಬೇಕು. ಅವರ ಹೆಸರಿನಲ್ಲಿ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಒತ್ತಾಯಿಸಿದರು.
ಮೀಸಲಾತಿ ಮುಸ್ಲಿಂ ಜನಾಂಗಕ್ಕೆ ಇರುವ ಕಾನೂನು ಬದ್ಧ ಹಕ್ಕು ಅನ್ನುವದನ್ನು ಮರೆಯದೆ ಆರ್ಥಿಕ, ಶೈಕ್ಷಣಿಕ, ರಾಜಕೀಯ ಹಕ್ಕನ್ನು ಎಲ್ಲ ರಾಜಕೀಯ ಪಕ್ಷಗಳು ಸರಕಾರಗಳ ಮೇಲೆ ಒತ್ತಡ ತಂದ ಸಾಚಾರ ವರದಿ ಹಾಗೂ ಪ್ರತ್ಯೇಕ ಮುಸ್ಲಿಂ ಮೀಸಲಾತಿ ಜಾರಿಗೆ ತರಲು ಒತ್ತಾಯಿಸಬೇಕು. ಸರಕಾರಿ ಮತ್ತು ಅರೇ ಸರಕಾರಿ ನೌಕರಿಯಲ್ಲಿ ಇರುವ ಮುಸ್ಲಿಂ ಜನಾಂಗದ ನೌಕರದಾರರಿಗೆ ಮೀಸಲಾತಿ ಒದಗಿಸಿ ಅವರಿಗೆ ಬಡ್ತಿ ಕಲ್ಪಿಸಬೇಕು ಎಂದರು.
ಸರಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ, ಅನುದಾನಿತ ಶಿಕ್ಷಣ-ಸಂಸ್ಥೆಗಳಲ್ಲಿ ಮುಸ್ಲಿಂರಿಗೆ ಪ್ರತ್ಯೇಕ ಮೀಸಲಾತಿ ಜೊತೆಗೆ ಉದ್ಯೋಗ ನೀಡಿ, ನಿರುದ್ಯೋಗ ಸಮಸ್ಯೆಯನ್ನು ತೊಲಗಿಸಬೇಕು. ಮತ್ತು ಈ ಸರಕಾರದ ವಿವಿಧ ಯೋಜನೆಗಳಲ್ಲಿ ಕಾಮಗಾರಿಗಳಿಗೆ ಟೆಂಡರ್ ಮಾಡುವಾಗ ಗುತ್ತಿಗೆ ಆದಾರದಲ್ಲಿ ಕೆಲಸ ಮಾಡಲು ಪ್ರತ್ಯೇಕ ಮೀಸಲಾತಿ ನೀಡಬೇಕು. ಮಹಿಳಾ ನೌಕರದಾರರಿಗೆ ನೌಕರಿಯಲ್ಲಿ ಬಹಳ ತೊಂದರೆಯಾಗುತ್ತಿದ್ದು, ಅವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications