ನಾಯ್ಡು ನೆಲಕಚ್ಚುವಂತೆ ಮಾಡುವೆ : ಜಗನ್ ಅಮ್ಮ

ಸಂಸದ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಸಿಬಿಐ ತನಿಖೆ ನಡೆಯುವಂತೆ ಮಾಡುವಲ್ಲಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬುನಾಯ್ಡು ಪ್ರಮುಖ ಪಾತ್ರವಹಿಸಿದ್ದರು. ಈ ದ್ವೇಷವನ್ನು ತೀರಿಸಿಕೊಳ್ಳಲು ಹೈಕೋರ್ಟ್ ಮೆಟ್ಟಿಲೇರಿದ್ದ ವಿಜಯಮ್ಮ ಕೊಂಚ ಯಶಸ್ಸು ಕಂಡಿದ್ದರು.
ಆಕ್ರಮ ಆಸ್ತಿ ಗಳಿಕೆ ಸಂಬಂಧಿಸಿಂತೆ ನಾಯ್ಡು ವಿರುದ್ಧ ತನಿಖೆಗೆ ಕೋರ್ಟ್ ಆದೇಶಿಸಿತ್ತು. ಆದರೆ, ಆಂಧ್ರ ಹೈಕೋರ್ಟ್ ಸಿಬಿಐ ತನಿಖೆಗೆ ತಡೆ ನೀಡಿದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ವಿಜಯಮ್ಮ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ನಾಯ್ಡು ಕೇಸ್ ಕೈಗೆತ್ತಿಕೊಂಡಿರುವ ಹೈಕೋರ್ಟ್ ವಿಭಾಗೀಯ ಪೀಠದ ಬಗ್ಗೆ ವೈಎಸ್ ಆರ್ ಕಾಂಗ್ರೆಸ್ ನಾಯಕರು ಸಂಶಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣವೂ ಇದೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಹೊರತು ಪಡಿಸಿ ಉಳಿದ ಆರೋಪಿಗಳಾದ ಸುಜನಾ ಚೌಧರಿ, ಎನ್ ನಾಗೇಶ್ವರ ರಾವ್ ಹಾಗೂ ರಾಮೋಜಿ ರಾವ್ ಅವರು ಈಗಾಗಲೇ ಸುಪ್ರೀಂಕೋರ್ಟ್ ಮೊರೆ ಹೊಕ್ಕಿದ್ದಾರೆ.
ನಾಯ್ಡು ಅವರಿಗೆ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡುತ್ತದೆ ಎಂದು ಮುಂಚಿತವೇ ತಿಳಿದಿತ್ತೇ ಎಂದು ವೈಎಸ್ ಆರ್ ಕಾಂಗ್ರೆಸ್ಸಿಗರು ಪ್ರಶ್ನಿಸಿದ್ದಾರೆ. ಈಗ ಸುಪ್ರೀಂಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಬಹುದು ಅಥವಾ ಮತ್ತೊಂದು ಹೈಕೋರ್ಟ್ ಪೀಠಕ್ಕೆ ವರ್ಗಾಯಿಸಬಹುದು. ಒಟ್ಟಿನಲ್ಲಿ ನಾಯ್ಡು ನಿದ್ರಾಭಂಗಕ್ಕೆ ವಿಜಯಮ್ಮ ಕಾರಣರಾಗಿದ್ದಾರೆ.












Click it and Unblock the Notifications