ಗಣಿ ಕೇಸ್: ಕುಮಾರಸ್ವಾಮಿಗೆ ಕೋರ್ಟ್ ನಿಂದ ರಿಲೀಫ್

ಎಚ್ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿ, ತನಿಖೆ ನಡೆಸುತ್ತಿದ್ದರು. ಆದರೆ, ಎಫ್ ಐಆರ್ ದಾಖಲಾತಿ ರದ್ದು ಕೋರಿ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಕುಮಾರಸ್ವಾಮಿ ಅವರ ವಿರುದ್ಧ ತನಿಖೆಗೆ 4 ವಾರಗಳ ಕಾಲ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಜೊತೆಗೆ ದೂರುದಾರ ಅಬ್ರಹಾಂಗೆ ನೋಟಿಸ್ ಜಾರಿ ಮಾಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಕುಟುಂಬದ ಸದಸ್ಯರನ್ನು ಬಂಧಿಸಿ, ವಿಚಾರಣೆ ನಡೆಸುವಂತಿಲ್ಲ ಎಂದು ಹೈಕೋರ್ಟ್ ಪೀಠ ತನ್ನ ಆದೇಶದಲ್ಲಿ ಹೇಳಿದೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಧರಂಸಿಂಗ್ ಹಾಗೂ ಎಸ್ ಎಂ ಕೃಷ್ಣ ಅವರ ವಿರುದ್ಧ ತನಿಖೆ ನಡೆಸುವಂತೆ ಡಿ.3ರಂದು ಲೋಕಾಯುಕ್ತ ವಿಶೇಷ ಕೋರ್ಟ್ ಮಹತ್ವದ ಆದೇಶ ಹೊರಡಿಸಿತ್ತು.
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 156(3) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಎಡಿಜಿಪಿ ಸೂರ್ಯನಾರಾಯಣ ರಾವ್ ಅವರ ನೇತೃತ್ವದ ತಂಡ ತನಿಖೆ ಆರಂಭಿಸಿದ್ದರು.












Click it and Unblock the Notifications