ಹಿರಿಯೂರು ಬಳಿ ಭೀಕರ ಬಸ್ ಅಪಘಾತ, 6 ಸಾವು

ಚಳ್ಳಕೆರೆಯಿಂದ ಬೆಂಗಳೂರು ಕಡೆಗೆ ಹೊರಟ್ಟಿದ್ದ ಖಾಸಗಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ.
ಐಮಂಗಲ ಠಾಣೆ ವ್ಯಾಪ್ತಿಯ ಯರಬಳ್ಳಿ ಗ್ರಾಮದ ಬಳಿ ನಡೆದ ಈ ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಗಾಯಗೊಂಡವರನ್ನು ಹಿರಿಯೂರು, ಚಳ್ಳಕೆರೆ, ಚಿತ್ರದುರ್ಗದ ಆಸ್ಪತ್ರೆಗೆ ಸೇರಿಸಲಾಗಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಮೃತರನ್ನು ಚಳ್ಳಕೆರೆ ಮೂಲದವರು ಇರಬಹುದು ಎನ್ನಲಾಗಿದೆ. ಐಮಂಗಲ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.












Click it and Unblock the Notifications