ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಸ್ಯರ ಆಯ್ಕೆ ರದ್ದು
ಬೆಂಗಳೂರು,
ಡಿ. 17 : ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ಮುಂದಿನ ಆದೇಶ ಬರುವವರೆಗೆ ತಡೆಹಿಡಿಯಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. id="toptextpromo">ಫೆಬ್ರವರಿ
8ರಂದು ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿತ್ತು. ಆದರೆ, ಈ ಆದೇಶವನ್ನು ತಡೆಹಿಡಿಯಲು ಕಾರಣವೇನೆಂದು ಪ್ರಕಟಣೆಯಲ್ಲಿ ಇಲಾಖೆ ತಿಳಿಸಿಲ್ಲ. id='are-slot-1' class='oiad oi-axt oiadv'> id='top-searched-articles'>ಮಾಧ್ಯಮ
ಅಕಾಡೆಮಿಗೆ ಪ್ರಜಾವಾಣಿ ಸಹಾಯಕ ಸಂಪಾದಕ ಎಂ.ಎ. ಪೊನ್ನಪ್ಪ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಮೂರು ವರ್ಷಗಳ ಕಾಲ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಬೇಕಾಗಿತ್ತು. ಕಳೆದ ನ.28ರಂದು ಸುಮಾರು 48 ಹಿರಿಯ ಮತ್ತು ಕಿರಿಯ ಪತ್ರಕರ್ತರಿಗೆ 2010 ಮತ್ತು 2011ನೇ ಸಾಲಿನ ಮಾಧ್ಯಮಕ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.











Click it and Unblock the Notifications