ಮಾಜಿ ಸಿಎಂ ಧರಂ ಸಿಂಗ್ ಗೂ ಸಿಕ್ತು ರಿಲೀಫ್

ಪಟ್ಟಾ ಜಮೀನಿನಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಎನ್ ಧರಂಸಿಂಗ್ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ಹೈಕೋರ್ಟ್ ನಾಲ್ಕು ವಾರಗಳ ಕಾಲ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ವಿ.ಪಿಂಟೋ, ಖಾಸಗಿ ದೂರು ಸಲ್ಲಿಸಿದ ಅಬ್ರಹಾಂ ಟಿ.ಜೆ ಮತ್ತು ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಮುಂದಿನ ವಿಚಾರಣೆಯನ್ನು ಜನವರಿ 10ಕ್ಕೆ ಮುಂದೂಡಲಾಗಿದೆ. ಆರೋಪಿಗಳಾಗಿರುವ ಐಎಎಸ್ ಅಧಿಕಾರಿ ಡಿ.ಎಸ್.ಅಶ್ವತ್ಥ್, ಎಂಎಂಎಲ್ ಉಪ ಪ್ರಧಾನ ವ್ಯವಸ್ಥಾಪಕರಾದ ಕೆ.ಶ್ರೀನಿವಾಸ ಹಾಗೂ ಶಂಕರಲಿಂಗಯ್ಯ ವಿರುದ್ಧದ ಲೋಕಾಯುಕ್ತ ತನಿಖೆಗೂ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ನೀಡಿ, ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಿದರು.












Click it and Unblock the Notifications