ಬೆಂಗಳೂರು ವಿವಿ ಒಡೆದು ಎರಡು ಪ್ರತ್ಯೇಕ ವಿವಿ

ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕಾಲದಲ್ಲಿ ಎನ್ ರುದ್ರಯ್ಯ ಸಮಿತಿ ಮಾಡಿದ್ದ ಶಿಫಾರಸ್ಸಿನ ಅನ್ವಯ ಈ ವಿಭಜನೆ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಆಚಾರ್ಯ ಹೇಳಿದರು.
ಸದ್ಯ ವಿ.ವಿ. ವ್ಯಾಪ್ತಿಗೆ ಸುಮಾರು 760ಕ್ಕೂ ಹೆಚ್ಚು ಕಾಲೇಜುಗಳು ಒಳಪಡುತ್ತವೆ. ವಿದ್ಯಾರ್ಥಿಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಇದರಿಂದ ಶಿಕ್ಷಣ ಗುಣಮಟ್ಟ ಕಾಪಾಡಿಕೊಳ್ಳಲು ಕಷ್ಟವಾಗುತ್ತಿದೆ.
ಹೊಸ ವಿವಿ ಹೆಸರುಗಳು: ಕೋಲಾರ ಮತ್ತು ಚಿಕ್ಕಬಳ್ಳಾಪುರ ವ್ಯಾಪ್ತಿಗೆ ಒಂದು ವಿಶ್ವ ವಿದ್ಯಾಲಯ, ಬಿಬಿಎಂಪಿ ವ್ಯಾಪ್ತಿಗೆ ಮತ್ತೊಂದು ಎಂದು ರೂಪಿಸಲಾಗುವುದು. ಬೆಂಗಳೂರು ಉತ್ತರ ಹಾಗೂ ದಕ್ಷಿಣ ವಿಶ್ವ ವಿದ್ಯಾಲಯ ಎಂದು ಹೆಸರಿಸುವ ಸಾಧ್ಯತೆಯಿದೆ.
250 ಕಾಲೇಜುಗಳಿಗೆ ಒಂದು ವಿ.ವಿಯನ್ನು ತೆರೆಯಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಕುಲಪತಿ ಹಾಗೂ ಸಂಬಂಧಪಟ್ಟವರೊಂದಿಗೆ ಶೀಘ್ರದಲ್ಲಿಯೇ ಸಭೆ ನಡೆಸಲಾಗುವುದು. ನಂತರ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಅಂತಿಮ ಕ್ರಮ ಕೈಗೊಳ್ಳಲಾಗುವುದು ಎಂದು ಆಚಾರ್ಯ ಹೇಳಿದರು.
ಈ ರೀತಿ ಬೆಂ.ವಿ.ವಿಯನ್ನು ಮೂರು ಭಾಗಗಳನ್ನಾಗಿ ಮಾಡುವುದರಿಂದ ಪರೀಕ್ಷಾ ಫಲಿತಾಂಶಗಳು ಶೀಘ್ರವಾಗಿ ವಿದ್ಯಾರ್ಥಿಗಳಿಗೆ ಲಭ್ಯವಾಗುತ್ತದೆ. ಉಪ ಕುಲಸಚಿವ ಡಾ. ಎನ್ ಪ್ರಭುದೇವ ಅವರ ಮೇಲೆ ಎಬಿವಿಪಿ ಹಲ್ಲೆ ಮಾಡಿದ್ದು ಕೂಡಾ ಪರೀಕ್ಷಾ ಸಂಬಂಧಿಸಿದ ಗೊಂದಲಕ್ಕೆ ಎಂಬುದನ್ನು ಮರೆಯುವಂತಿಲ್ಲ ಎಂದು ಆಚಾರ್ಯ ಹೇಳಿದರು.











Click it and Unblock the Notifications