ಕುಮಾರಸ್ವಾಮಿ ತಟಸ್ಥ ನಿಲುವಿನ ಹಿಂದಿನ ರಹಸ್ಯ

ವಿಧಾನಪರಿಷತ್ ಚುನಾವಣೆಯಲ್ಲಿ ಬೆಂಬಲದ ವಿಚಾರದಲ್ಲಿ ಕುಮಾರಸ್ವಾಮಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡಬೇಕೆನ್ನುವ ಸಂದೇಶ ಕಾಂಗ್ರೆಸ್ ಹೈಕಮಾಂಡ್ ಗೆ ರವಾನಿಸಲಾಗಿತ್ತು ಎಂದು ದೆಹಲಿಯ ಕೆಲ ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.
ರೈತರಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಲು ದೆಹಲಿಗೆ ತೆರಳಿದ್ದ ನಿಯೋಗದದಲ್ಲಿ ಭಾಗವಹಿಸಿದ್ದ ಜೆಡಿಎಸ್ ಮುಖಂಡರು ಅಜಿತ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡಿದ ಹಾಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೂ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿತು ಎಂದು ತಿಳಿದು ಬಂದಿದೆ.
ಇದರಿಂದ ಮುಂದೆ ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಸಹಕಾರಿಯಾಗಲಿದೆ, ಸದ್ಯ ರಾಜ್ಯದಲ್ಲಿ ಭದ್ರ ನೆಲೆ ಕಂಡಿರುವ ಬಿಜೆಪಿಗೆ ಸಡ್ಡು ಹೊಡೆಯಲು ಜಾತ್ಯತೀತ ಶಕ್ತಿಗಳು ಒಂದಾಗದಿದ್ದರೆ ಕಷ್ಟ. ಕಾಂಗ್ರೆಸ್ -ಜೆಡಿಎಸ್ ಜತೆಗೂಡಿದರೆ ಅಧಿಕಾರಕ್ಕೆ ಬರುವುದು ಖಚಿತ ಎಂಬ ಲೆಕ್ಕಾಚಾರ ಜೆಡಿಎಸ್ ಕಾಂಗ್ರೆಸ್ ನಾಯಕರ ಮುಂದಿಟ್ಟಿತ್ತು.
ಆದರೆ, ಈ ಸಂಧಾನ ಮಾತುಕತೆ ಸಫಲವಾಗದ ಹಿನ್ನಲೆಯಲ್ಲಿ ಜೆಡಿಎಸ್ ಚುನಾವಣೆಯಲ್ಲಿ ತಟಸ್ಥ ನಿಲುವು ತಾಳಿತು ಎನ್ನುತ್ತವೆ ಮೂಲಗಳು.












Click it and Unblock the Notifications