ಬೆಂಗಳೂರಿನಲ್ಲಿ ಸಮಾಧಿ ಬಳಿ ಕಾಲೇಜು ವಿದ್ಯಾರ್ಥಿನಿ ಗ್ಯಾಂಗ್ ರೇಪ್

ಭಾನುವಾರ ರಾತ್ರಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ವಿಲ್ಸನ್‌ಗಾರ್ಡನ್ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಯುವತಿಯು ಪ್ರಿಯಕರ ಯಶ್ ರಾಜ್ ಜತೆ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಶಾಂತಿನಗರ ಬರ್ಲಿ ಸ್ಟ್ರೀಟ್ ಬಳಿ ಬೈಕ್ ತಡೆದ ದುಷ್ಕರ್ಮಿಗಳು ಯಶ್ ರಾಜ್ ಮೇಲೆ ಹಲ್ಲೆ ನಡೆಸಿದ ಬಳಿಕ ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.
ಅತ್ಯಾಚಾರಕ್ಕೊಳಾಗದ ಯುವತಿ ಹಲಸೂರು ನಿವಾಸಿ. ಪ್ರಕರಣದ ಸಂಬಂಧ ಪೊಲೀಸರು ಈಗಾಗಲೇ 7 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೊನ್ನೆಯಷ್ಟೇ ಕೈರೋದಲ್ಲಿ ಸಮಾಧಿ ಘಾಟ್ ಬಳಿ ಬಾಯ್ ಫ್ರೆಂಡ್ ಜತೆ ಕಾರಿನಲ್ಲಿದ್ದ 23 ವರ್ಷದ ಗಗನಸಖಿಯ ಮೇಲೆ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಅತ್ಯಾಚಾರಕ್ಕೊಳಗಾದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 'ಬಾಧಿತ ಯುವತಿ ಇನ್ನೂ ಮಾತನಾಡುವ ಸ್ಥಿತಿಯಲ್ಲಿಲ್ಲ. ವೈದ್ಯಕೀಯ ಪರೀಕ್ಷೆ ಮತ್ತು ಆಕೆಯ ಹೇಳಿಕೆಯನ್ನು ಆಧರಿಸಿ ಆರೋಪಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಸದ್ಯಕ್ಕೆ ಡಕಾಯಿತಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications