ಚಳ್ಳಕೆರೆಯಲ್ಲಿ ಭಾರತ ನಿರ್ಮಾಣ ಮಾಹಿತಿ ಆಂದೋಲನ

Janardhana Swamy
ಚಳ್ಳಕೆರೆ, ಡಿ. 27 : ಭಾರತ ನಿರ್ಮಾಣದ ಕಾರ್ಯಕ್ರಮಗಳು ಬರಿ ಮಾಹಿತಿ ನೀಡುವುದಕ್ಕಾಗಿ ಮಾತ್ರ ಸೀಮಿತವಾಗದೆ, ಇನ್ನೂ ಒಂದು ಹೆಜ್ಜೆ ಮುಂದೆ ಸಾಗಿ ಸಾರ್ವಜನಿಕರಿಗೆ ಇದರ ಸವಲತ್ತುಗಳನ್ನು ಪಡೆಯುವ ಬಗ್ಗೆ ಹೆಚ್ಚಿನ ಸಹಾಯ ಹಸ್ತ ಚಾಚಬೇಕು. ಜನಪರವಾದ ಈ ಕಾರ್ಯಕ್ರಮಗಳು ಸಾಕಾರವಾಗುವ ನಿಟ್ಟಿನಲ್ಲಿ ಹೆಚ್ಚು ಶ್ರಮ ವಹಿಸಬೇಕೆಂದು ಚಿತ್ರದುರ್ಗ ಲೋಕಸಭಾ ಸದಸ್ಯ ಜನಾರ್ಧನ ಸ್ವಾಮಿ ಸೋಮವಾರ ತಿಳಿಸಿದರು.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಭಾರತ ನಿರ್ಮಾಣ ಸಾರ್ವಜನಿಕ ಮಾಹಿತಿ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ, ವಸ್ತು ಪ್ರದರ್ಶನದಲ್ಲಿ ಎಲ್ಲಾ ಮಾಹಿತಿಗಳ ಲಭ್ಯವಿದೆ, ಆದರೆ ಈ ಎಲ್ಲಾ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿಗಳಿಲ್ಲ. ಇವುಗಳನ್ನ ಜನರಿಗೆ ಒದಗಿಸಿ ಈ ಕಾರ್ಯಕ್ರಮಗಳು ಸಾಕಾರವಾಗುವಂತೆ ಮಾಡುವ ಜವಾಬ್ದಾರಿ ಇದಕ್ಕೆ ಸಂಬಂಧಿಸಿದ ಎಲ್ಲರ ಮೇಲಿದೆ ಎಂದು ಅವರು ಕಿವಿಮಾತು ಹೇಳಿದರು.

ಅಧ್ಯಕ್ಷೀಯ ಭಾಷಣ ಮಾಡುತ್ತ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಮಹಾಲಿಂಗಪ್ಪನವರು, ಭಾರತ ಸರ್ಕಾರದ ವಿವಿಧ ಯೋಜನೆಗಳು ಬಡ ಮತ್ತು ದುರ್ಬಲ ವರ್ಗದ ಜನರಿಗೆ ವರದಾನವಾಗಿವೆ. ದೂರದೃಷ್ಟಿ ಇರುವ ಈ ಯೋಜನೆಗಳನ್ನು ಈ ವರ್ಗದ ಜನರು ಅರ್ಥಮಾಡಿಕೊಂಡು ಸಬಲರಾಗುವ ಚಿಂತನೆಯೊಂದಿಗೆ ಇದನ್ನು ಕಾರ್ಯರೂಪಕ್ಕೆ ತರಬೇಕು ಎಂದು ಹೇಳಿದರು.

ಚಳ್ಳಕೆರೆಯ ಪುರಸಭೆ ಅಧ್ಯಕ್ಷ ಶ್ರೀಮತಿ ಪಿ. ಷಂಶದ್, ಚಿತ್ರದುರ್ಗ ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್, ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್. ಜಯರಾಮ್, ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ನಿರ್ದೇಶಕರಾದ ಎಂ. ನಾಗೇಂದ್ರ ಸ್ವಾಮಿಯವರು ಭಾಷಣ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+