ಯಡಿಯೂರಪ್ಪಗೆ ಅವಮಾನವಾದರೆ ಸುಮ್ಮನಿರೋಲ್ಲ

Beluru Gopala Krishna
ಬೆಂಗಳೂರು, ಡಿ 31: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಏನೇ ಆರೋಪಗಳಿದ್ದರೂ ಅದು ನ್ಯಾಯಾಲಯದಲ್ಲಿ ಇತ್ಯರ್ಥವಾಗಲಿದೆ. ಯಡಿಯೂರಪ್ಪ ಅವರನ್ನು ಅವಮಾನಿಸಿದರೆ ನಾವು ಸಹಿಸುವುದಿಲ್ಲ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ.

ಬಿಎಸ್ವೈ ಸದ್ಯ ಆರೋಪಿಯಷ್ಟೇ, ಅವರು ಆರೋಪದಿಂದ ಮುಕ್ತರಾಗುವ ತನಕ ಅವರಿಗೆ ಯಾವುದೇ ಸ್ಥಾನಮಾನವಿಲ್ಲ ಎಂದು ಹೈಕಮಾಂಡ್ ನೇರವಾಗಿ ಹೇಳಬೇಕು. ಇಂತಹ ಹೇಳಿಕೆಗಳನ್ನು ಸ್ಥಳೀಯ ಮುಖಂಡರು ನೀಡಬಾರದೆಂದು ಬೇಳೂರು ಸಲಹೆ ನೀಡಿದ್ದಾರೆ.

ಯಡಿಯೂರಪ್ಪ ಬಿಜೆಪಿಯನ್ನು ಕಟ್ಟಿ ಬೆಳೆಸಿದವರು. ಅವರು ಈಗ ನೋವಿನಲ್ಲಿದ್ದಾರೆ. ಈಶ್ವರಪ್ಪ ಮತ್ತು ಯಡಿಯೂರಪ್ಪ ಇಬ್ಬರೂ ನಮ್ಮ ನಾಯಕರು, ಅವರ ಹೇಳಿಕೆಗೆ ಪ್ರತಿಕ್ರಿಯಿಸುವಷ್ಟು ದೊಡ್ದನವನು ನಾನಲ್ಲ ಮತ್ತು ಯಡಿಯೂರಪ್ಪ ಅವರ ವಿರುದ್ದ ಇಲ್ಲ ಸಲ್ಲದ ಆರೋಪ ಮಾಡುವುದು ಬೇಡ ಎಂದು ಹೇಳಿದ್ದಾರೆ.

ಅಬಕಾರಿ ಸಚಿವ ರೇಣುಕಾಚಾರ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಬೇಳೂರು, ರಾಜ್ಯ ನಾಯಕತ್ವದ ವಿಚಾರದಲ್ಲಿ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ, ಯಡಿಯೂರಪ್ಪ ಅವರನ್ನು ಅವಮಾನಿಸಿದರೆ ನಾವು ಸುಮ್ಮನಿರುದುವಿಲ್ಲ ಎಂದು ಬೇಳೂರು ಗೋಪಾಲಕೃಷ್ಣ ಎಚ್ಚರಿಕೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+