ತಹಶೀಲ್ದಾರ್ ಕಚೇರಿಯಲ್ಲಿ ಪಾಕ್ ಧ್ವಜ, ಸಿಂದಗಿ ಬಂದ್
ಸಿಂದಗಿ
(ಬಿಜಾಪುರ ಜಿಲ್ಲೆ) , ಜ 2: ಇಲ್ಲಿನ ಮಿನಿ ವಿಧಾನಸೌಧದ ಆವರಣದಲ್ಲಿಯ ಧ್ವಜ ಸ್ಥಂಭದಲ್ಲಿ ದುಷ್ಕರ್ಮಿಗಳು ಪಾಕ್ ಧ್ವಜ ಹಾರಿಸಿರುವ ಘಟನೆ ಭಾನುವಾರ (ಜ 1) ನಡೆದ ಹಿನ್ನಲೆಯಲ್ಲಿ, ಇದನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಇಂದು (ಜ 2) ಸಿಂದಗಿ ಬಂದ್ ಗೆ ಕರೆ ನೀಡಿದೆ. id="toptextpromo">ಪಟ್ಟಣದಲ್ಲಿ
ಉದ್ವಿಗ್ನ ಪರಿಸ್ಥಿತಿ ತಲೆದೋರಿದ್ದು, ದುಷ್ಕರ್ಮಿಗಳನ್ನು ಬಂಧಿಸ ಬೇಕೆಂದು ಹಿಂದೂಪರ ಸಂಘಟನೆಗಳು ಪಟ್ಟು ಹಿಡಿದಿವೆ. ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು ಪ್ರಾಥಮಿಕ ವರದಿಗಳ ಪ್ರಕಾರ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. id='are-slot-1' class='oiad oi-axt oiadv'> id='top-searched-articles'>ಈ
ಕೃತ್ಯ ಮಾಡಿದವರನ್ನು ಬಂಧಿಸುವಂತೆ ಒತ್ತಾಯಿಸಿ ಭಾನುವಾರ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತ ಮೆರವಣಿಗೆಯಲ್ಲಿ ಸಾಗುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡ ಹಿನ್ನಲೆಯಲ್ಲಿ ಭಾನುವಾರ ಕೂಡಾ ಅಂಗಡಿಗಳು ಮುಚ್ಚಿದ್ದವು ಮತ್ತು ವಾರದ ಸಂತೆಯನ್ನೂ ಸಹ ರದ್ದುಪಡಿಸಲಾಗಿತ್ತು.











Click it and Unblock the Notifications