ಕಾಂಗ್ರೆಸ್ ತೊರೆಯಲು 40 ಶಾಸಕರು ಸಿದ್ಧ

ಸುತ್ತೂರು ಶ್ರೀಗಳು ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಜೊತೆ ದೀರ್ಘ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಪಾಟೀಲ್ ಮಾತನಾಡಿದರು.
ಕಾಂಗ್ರೆಸ್ ನಲ್ಲಿ ದೇವರಿಗಿಂತ ಪೂಜಾರಿಗಳ ಮಾತೇ ದೊಡ್ಡದಾಗಿದೆ. ಇಲ್ಲಿನ ಪರಿಸ್ಥಿತಿಯನ್ನು ಸಮಗ್ರವಾಗಿ ಹೈಕಮಾಂಡ್ ಗೆ ತಿಳಿಸುತ್ತೇನೆ. ಹಿರಿಯ ನಾಯಕ ಸಿದ್ದರಾಮಯ್ಯ ಅವರೊಡನೆ ಮುಂದಿನ ನಡೆ ಬಗ್ಗೆ ಚರ್ಚಿಸಿದ್ದೇನೆ ಎಂದರು.
ಸಿದ್ದರಾಮಯ್ಯ ಎನ್ ಸಿಪಿ ಸೇರುತ್ತಾರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಪಾಟೀಲ್, ಈ ಬಗ್ಗೆ ಈ ಸಂದರ್ಭದಲ್ಲಿ ಏನು ಹೇಳಲಾಗದು. ಸಂಕ್ರಾಂತಿ ನಂತರ ಉತ್ತರ ದೊರೆಯಲಿದೆ. ಸಿದ್ದರಾಮಯ್ಯ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಿದರು.












Click it and Unblock the Notifications