ಧರ್ಮ-ಕೃಷ್ಣ-ಸ್ವಾಮಿ ಅಕ್ರಮ ವರದಿ ಸಲ್ಲಿಕೆಗೆ ಫೆ.2 ರ ಗಡುವು

Dharam Krishna HD Kumaraswamy
ಬೆಂಗಳೂರು, ಜ.5: ಅಕ್ರಮ ಗಣಿಗಾರಿಕೆಯ ಸುಳಿಯಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿಗಳಾದ ಎಸ್ಎಂ ಕೃಷ್ಣ, ಧರ್ಮ ಸಿಂಗ್ ಮತ್ತು ಎಚ್ ಡಿ ಕುಮಾರಸ್ವಾಮಿ ಅವರಿಗೆ ಇನ್ನಷ್ಟು ನಿರಾಂತಕವಾಗಿ ಉಸಿರಾಡಬಹುದಾಗಿದೆ.

ಮೂವರು ಮಾಜಿ ಸಿಎಂಗಳ ಅಧಿಕಾರ ಅವಧಿಯಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ವಿರುದ್ಧ ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ಟಿಜೆ ಅಬ್ರಹಾಂ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. ಅವರು ಸಲ್ಲಿಸಿರುವ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ ತನಿಖೆಗೆ ನ್ಯಾ. ಸುಧೀಂದ್ರರಾವ್ ಅವರು ಆದೇಶಿಸಿದ್ದರು.

ಜ.6ರಂದು ಲೋಕಾಯುಕ್ತ ಪೊಲೀಸರು ತನಿಖಾ ವರದಿಯನ್ನು ಎಸ್ ಪಿ ಜಗದೀಶ್ ಸಲ್ಲಿಸಬೇಕಿತ್ತು. ಅಕ್ರಮ ಗಣಿಗಾರಿಕೆ ಸಂಬಂಧಿಸಿದ ದಾಖಲೆಗಳು ಸಾವಿರಾರು ಸಂಖ್ಯೆಯಲ್ಲಿದೆ. ತನಿಖೆ ಪೂರ್ಣಗೊಳಿಸಲು ಹೆಚ್ಚಿನ ಅವಧಿ ನೀಡಬೇಕು ಎಂದು ನ್ಯಾ. ಸುಧೀಂದ್ರ ರಾವ್ ಅವರನ್ನು ಲೋಕಾಯುಕ್ತ ಎಸ್ ಪಿ ಜಗದೀಶ್ ಕೋರಿದರು.

ಆದರೆ, ಹೆಚ್ಚಿನ ಕಾಲಾವಕಾಶ ನೀಡಲು ಒಪ್ಪದ ನ್ಯಾ. ಸುಧೀಂದ್ರ ರಾವ್ ಅವರು ಫೆ.2ರೊಳಗೆ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದ್ದಾರೆ.

ಈ ಮಧ್ಯೆ ಮೂವರು ಮಾಜಿ ಸಿಎಂಗಳು ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ ಹೊಕ್ಕಿದ್ದಾರೆ. ಈ ಪ್ರಕರಣದ ವಿಚಾರಣೆ ಜಾರಿಯಲ್ಲಿದ್ದು, ಹೈಕೋರ್ಟ್ ತೀರ್ಪು ಹೊರ ಬಿದ್ದ ನಂತರ ಪ್ರತಿವಾದಿ ವಕೀಲರು ತಮ್ಮ ಮುಂದಿನ ನಡೆಯನ್ನು ಪ್ರಕಟಿಸುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+