ಎಚ್ಡಿಕೆ, ಚೆನ್ನಿಗಪ್ಪ ವಿರುದ್ಧ ಲೋಕಾಯುಕ್ತ ಪೊಲೀಸ್ ಎಫ್ಐಆರ್
ಬೆಂಗಳೂರು,
ಜ. 6 : ಅರ್ಕಾವತಿ ಬಡಾವಣೆಯ ಬಿಡಿಎ ನಿವೇಶನಗಳನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಮಾಜಿ ಶಾಸಕ ಚೆನ್ನಿಗಪ್ಪ ಮತ್ತು ಇನ್ನಿಬ್ಬರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಎಫ್ಐಆರ್ ದಾಖಲಿಸಿದ್ದಾರೆ. id="toptextpromo">ಚಾಮರಾಜನಗರದ
ಮಹದೇವಸ್ವಾಮಿ ಎಂಬುವವರು ಜ.2ರಂದು ದಾಖಲಿಸಿದ್ದ ಖಾಸಗಿ ದೂರಿನ ಅನ್ವಯ ತನಿಖೆ ನಡೆಸಿ ಜ.6ರೊಳಗೆ ವರದಿ ನೀಡುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಸುಧೀಂದ್ರರಾವ್ ಅವರು ಆದೇಶಿಸಿದ್ದರು. ಸಿಆರ್‌ಪಿಸಿಯ ಸೆಕ್ಷನ್ 156(3) ಅಡಿಯಲ್ಲಿ ತನಿಖೆಗೆ ಆದೇಶ ನೀಡಲಾಗಿತ್ತು. id='are-slot-1' class='oiad oi-axt oiadv'> id='top-searched-articles'>2007ರ
ಅಕ್ಟೋಬರ್‌ನಲ್ಲಿ ತಣಿಸಂದ್ರ ಗ್ರಾಮದಲ್ಲಿ 3.8 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಲು ಕುಮಾರಸ್ವಾಮಿ ಆದೇಶಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಂದಿನ ಅರಣ್ಯ ಸಚಿವರಾಗಿದ್ದ ಚೆನ್ನಿಗಪ್ಪ ಕೂಡ ಕುಮಾರಸ್ವಾಮಿ ಜೊತೆ ಈ ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎಂದು ದೂರಲಾಗಿದೆ.











Click it and Unblock the Notifications