ಮಕ್ಕಳ ಕನಸುಗಳಿಗೆ ಬಣ್ಣ ಹಚ್ಚಲು ಮಕ್ಕಳ ಮಿತ್ರ ಪಡೆ

Children friends squad in Karnataka
ಬೆಂಗಳೂರು, ಜ. 7 : ಮಕ್ಕಳ ಕನಸುಗಳಿಗೆ ಬಣ್ಣ ಹಚ್ಚಲು ಪ್ರಯತ್ನಿಸುತ್ತಿರುವ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ ಮಕ್ಕಳ ಮಿತ್ರ ಪಡೆಗಳನ್ನು ರಚಿಸಲಿದೆ ಎಂದು ಅಕಾಡೆಮಿಯ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ ಪ್ರದೀಪ್ ಭೂಸನೂರ ಮಠ ಅವರು ಶುಕ್ರವಾರ ಪ್ರಕಟಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ, ಬಾಲಕ-ಬಾಲಕಿಯರಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಗ್ರಾಮೀಣ ಕ್ರೀಡೆಗಳ ಸವಿಯನ್ನು ಪರಿಚಯಿಸುವ ಮಕ್ಕಳ ಹಬ್ಬ ಆಚರಣೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಮಕ್ಕಳ ಮಿತ್ರ ಪಡೆ ರಚನೆಗೆ ಮೊದಲ ಹಂತದಲ್ಲಿ ಆಯ್ಕೆಯಾಗಿದ್ದ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲ್ಲೂಕು, ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕು, ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲ್ಲೂಕು ಹಾಗೂ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕುಗಳಲ್ಲಿ ಈ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿರುವ ಹಿನ್ನೆಯಲ್ಲಿ ಈ ಕಾರ್ಯಕ್ರಮವನ್ನು ರಾಜ್ಯವ್ಯಾಪಿ ವಿಸ್ತರಿಸಲು ಉದ್ದೇಶಿಸಲಾಗಿದೆ ಎಂದರು.

ಮಕ್ಕಳ ಮನೋವಿಕಾಸಕ್ಕೆ ಸಂಬಂಧಿಸಿದಂತೆ ಕೃಷಿ ಮಾಡಲಿರುವ ಐವರು ವಿಜ್ಞಾನಿಗಳಿಗೆ ತಲಾ 50 ಸಾವಿರ ರು. ಫೆಲೋಶಿಪ್ ನೀಡಲು ಅಕಾಡೆಮಿ ಈಗಾಗಲೇ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ ಎಂದ ಅವರು, ಮಕ್ಕಳಿಗಾಗಿ ಕಥಾ ಕಮ್ಮಟಗಳು ಹಾಗೂ ಕಾವ್ಯ ಗೋಷ್ಠಿಗಳ ಜೊತೆಗೆ ನಾಟಕೋತ್ಸವ, ಚಲನಚಿತ್ರೋತ್ಸವ, ಮಕ್ಕಳ ಸಾಹಿತ್ಯ ಸಮ್ಮೇಳನ, ಬಾಲ ವಿಜ್ಞಾನ ಪ್ರಶಸ್ತಿ ಪ್ರದಾನ ಸಮಾರಂಭಗಳನ್ನು ವ್ಯವಸ್ಥೆಗೊಳಿಸುತ್ತಿದೆ ಎಂದು ವಿವರಿಸಿದರು.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷೆಗೆ ಸಿದ್ಧರಾಗಿ ಎಂಬ ಕಾರ್ಯಕ್ರಮವನ್ನೂ ಹಮ್ಮಿಕೊಂಡಿರುವ ಅಕಾಡೆಮಿ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಲಿರುವ ಬೇಸಿಗೆ ಶಿಬಿರಗಳನ್ನೂ ಆಯೋಜಿಸಲಿದೆ ಎಂದು ಅವರು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಕೆ.ವಿ. ಮಂಜುಳಾ ಕುಮಾರಿ ಅವರೂ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+