ಬಿಕ್ಕಟ್ಟು ಬಗೆಹರಿಸಲು ವರಿಷ್ಠರೆದಿರು ನಿರಾಣಿ ಸೂತ್ರ

BJP trouble shooter Murugesh Nirani
ನವದೆಹಲಿ, ಜ. 7 : "ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಲಿ, ಸದಾನಂದ ಗೌಡರು ಮುಖ್ಯಮಂತ್ರಿಯಾಗಿಯೇ ಮುಂದುವರಿಯಲಿ ಮತ್ತು ರಾಜ್ಯಾಧ್ಯಕ್ಷರಾಗಿರುವ ಕೆ.ಎಸ್. ಈಶ್ವರಪ್ಪಗೆ ಉಪಮುಖ್ಯಮಂತ್ರಿ ಹುದ್ದೆ ದಕ್ಕಲಿ. ಡಿವಿಎಸ್ ಅವರು ಸಿಎಂ ಹುದ್ದೆಯನ್ನು ಯಡಿಯೂರಪ್ಪನವರಿಗೆ ನೀಡಿದರೂ ಚಿಂತೆಯಿಲ್ಲ."

ಇವು ರಾಜ್ಯದಲ್ಲಿ ಹುಟ್ಟಿಕೊಂಡು ಹತೋಟಿ ಮೀರಿ ಬೆಳೆಯುತ್ತಿರುವ ಬಿಜೆಪಿಯಲ್ಲಿನ ಆಂತರಿಕ ಬಿಕ್ಕಟ್ಟನ್ನು ಬಗೆಹರಿಸಲು ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿರುವ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಬಿಜೆಪಿ ಹೈಕಮಾಂಡ್ ಮುಂದೆ ಇಟ್ಟಿರುವ ಹೊಸ ರಾಜಿ ಸೂತ್ರ. ಯಡಿಯೂರಪ್ಪ ಪರ ನಿಲುವನ್ನು ಅವರು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದಾರೆ.

ಶನಿವಾರ ಅವರು ರಾಷ್ಟ್ರದ ರಾಜಧಾನಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತೀನ್ ಗಡ್ಕರಿ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಸ್ತುತ ವಿದ್ಯಮಾನಗಳ ಬಗ್ಗೆ ವಿವರಣೆ ನೀಡಿದ್ದಾರೆ. ಯಡಿಯೂರಪ್ಪ ಪರ ಆರ್ ಅಶೋಕ್ ಲಾಬಿ ನಡೆಸಿದ ನಂತರ ಮಾಜಿ ಮುಖ್ಯಮಂತ್ರಿ ಪರ ವಕಾಲತ್ತು ವಹಿಸುತ್ತಿರುವ ಎರಡನೇ ಶಾಸಕ ಮುರುಗೇಶ್ ನಿರಾಣಿ.

ಯಡಿಯೂರಪ್ಪ ಕಳೆದ ನಲವತ್ತು ವರ್ಷಗಳಿಂದ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದು ಯಡಿಯೂರಪ್ಪನವರು. ಅನೇಕ ಚುನಾವಣೆಗಳನ್ನು ಗೆಲ್ಲಿಸಿಕೊಟ್ಟಿರುವ ಯಡಿಯೂರಪ್ಪನವರಿಗೆ ಉನ್ನತ ಸ್ಥಾನ ನೀಡಲೇಬೇಕು. ರಾಜ್ಯಾಧ್ಯಕ್ಷ ಸ್ಥಾನವನ್ನು ನೀಡಬೇಕು, ಇಲ್ಲದಿದ್ದರೆ ಸದಾನಂದ ಗೌಡರು ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಡಬೇಕು. ಹೀಗಾದರೆ ರಾಜ್ಯಕ್ಕೆ ಮತ್ತು ಬಿಜೆಪಿಗೆ ಒಳ್ಳೆಯದು ಎಂಬ ಚಿಂತನೆಯನ್ನು ವರಿಷ್ಠರ ಮುಂದಿಟ್ಟಿದ್ದಾರೆ ನಿರಾಣಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+