• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಪಠ್ಯದಲ್ಲಿ ಭಗವದ್ಗೀತೆ: ಸಿಎಂ

By Srinath
|
bhagavadgita-in-karnataka-schools-dvs-green-signals
ಬೆಂಗಳೂರು, ಜ.9: ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವಿದ್ದ ಕಾಲದಲ್ಲಿ (2007) ಆರಂಭವಾಗಿದ್ದ ರಾಜ್ಯಮಟ್ಟದ ಭಗವದ್ಗೀತಾ ಅಭಿಯಾನ ಭಾನುವಾರ ಬೆಂಗಳೂರಿನಲ್ಲಿ ಮಹಾಸಮರ್ಪಣೆಯಾಗಿದೆ.

ಇದಕ್ಕೆ ಶಿರಸಿ ಸೋಂದಾ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ರಾಮಕೃಷ್ಣ ಮಠದ ಹರ್ಷಾನಂದ ಸ್ವಾಮೀಜಿ, ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್‌. ಮುನಿಯಪ್ಪ ಮತ್ತು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಸೇರಿದಂತೆ ಅಸಂಖ್ಯಾತ ಜನ ಸಾಕ್ಷೀಭೂತರಾಧರು.

ನಗರದ ಅರಮನೆ ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಭಗವದ್ಗೀತಾ ಅಭಿಯಾನದ ಮಹಾಸಮರ್ಪಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ದಿವಿ ಸದಾನಂದಗೌಡ ಅವರು, 'ಭಗವದ್ಗೀತೆ ಮಾನವನ ಜೀವನದ ಸಾರ. ಯಾವುದೋ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಹಾಗಾಗಿ, ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸುವುದಕ್ಕೆ ಕ್ರಮ ಕೈಗೊಳ್ಳಲಾಗುವುದು' ಎಂದು ಘೋಷಿಸಿದರು.

'ಆದರೆ, ಈ ಬಗ್ಗೆ ಏಕಾಏಕಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಶಿಕ್ಷಣ ತಜ್ಞರು, ಸಚಿವರು, ಮುಖಂಡರೊಂದಿಗೆ ಚರ್ಚಿಸಿ ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸುವ ಬಗ್ಗೆ ಅಭಿಪ್ರಾಯಗಳನ್ನು ಸಂಗ್ರಹಿಸಿ, ಅಂತಿಮ ತೀರ್ಮಾನ ಪ್ರಕಟಿಸಲಾಗುವುದು. ಯಾವುದೇ ವಿವಾದಕ್ಕೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲಾಗುವುದು' ಎಂದು ಅವರು ಸ್ಪಷ್ಟಪಡಿಸಿದರು.

ಸಾಮಾಜಿಕ ಸಾಮರಸ್ಯ, ವ್ಯಕ್ತಿತ್ವ ವಿಕಸನ ಸೇರಿದಂತೆ ಸ್ವಾಸ್ಥ್ಯ ಸಮಾಜಕ್ಕಾಗಿ ಭಗವದ್ಗೀತೆ ಅಭಿಯಾನ ಔಚಿತ್ಯಪೂರ್ಣವಾಗಿದೆ. ಮನುಷ್ಯನ ಮನಸ್ಸನ್ನು ಶುದ್ಧಗೊಳಿಸುವ ಜ್ಞಾನದೀವಿಗೆಯಾಗಿದೆ. ಭಗವದ್ಗೀತೆ ಬಗ್ಗೆ ಅಪಸ್ವರ ಎತ್ತುವವರಿಗೆ ಇತ್ತೀಚೆಗೆ ರಷ್ಯಾ ನ್ಯಾಯಾಲಯದಲ್ಲಿ ಹೊರಬಂದ ತೀರ್ಪು ಉತ್ತರವಾಗಿದೆ ಎಂದು ಸದಾನಂದಗೌಡ ಅವರು ಹೇಳಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ಇನ್ನಷ್ಟು ಭಗವದ್ಗೀತೆ ಸುದ್ದಿಗಳುView All

English summary
Karnataka chief minister DV Sadananda Gowda on Sunday announced that the government was considering introducing the Bhagavad Gita in primary and secondary schools after seeking public opinion. He was speaking at the concluding session of Gita Abhiyana in Bangalore on Jan 8th.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more