ಮಧ್ಯಪ್ರದೇಶದಲ್ಲಿ ಆಗಿದ್ದು ರಾಜ್ಯದಲ್ಲೇಕೆ ಇಲ್ಲ:ಸ್ವರ್ಣವಲ್ಲಿ ಶ್ರೀ

bhagavadgita-in-schools-for-mp-ok-but-not-karnataka-why
ಬೆಂಗಳೂರು, ಜ.9: ಮಧ್ಯ ಪ್ರದೇಶದಲ್ಲಿ ಸಾಧ್ಯವಾದ ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಕೆ ಕರ್ನಾಟಕದಲ್ಲಿ ಯಾಕೆ ಸಾಧ್ಯವಾಗುತ್ತಿಲ್ಲ ಎಂದು ಶಿರಸಿ ಸೋಂದಾ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಶ್ರೀಮದ್ ಜಗದ್ಗುರು ಶಂಕರಾ ಚಾರ್ಯ ಶ್ರೀ ಸೋಂದ ಸ್ವರ್ಣ ವಲ್ಲಿ ಮಹಾಸಂಸ್ಥಾನ ಆಯೋಜಿಸಿದ್ದ ಭಗವದ್ಗೀತಾ ಅಭಿಮಾಯನದ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದ ಅವರು, ಸಾಮಾನ್ಯ ವ್ಯಕ್ತಿಯನ್ನು ವಿಶ್ವಮಾನವನನ್ನಾಗಿ ರೂಪಿಸಲು ಭಗವದ್ಗೀತೆ ಅಗತ್ಯ.

ಭಗವದ್ಗೀತೆಯನ್ನು ಶಿಕ್ಷಣದಲ್ಲಿ ಅಳವಡಿಸಲು ಅನ್ಯಧರ್ಮಗಳ ಯಾವುದೇ ವಿರೋಧ ವ್ಯಕ್ತವಾಗಿಲ್ಲ. ಹಾಗಾಗಿ, ಸಂಕುಚಿತ ಭಾವನೆಗಳನ್ನು ಬದಿಗೊತ್ತಿ, ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸಬೇಕು. ಅಷ್ಟಕ್ಕೂ ಈಗಾಗಲೇ ಮಧ್ಯಪ್ರದೇಶದಲ್ಲಿ ಇದು ಜಾರಿಗೆ ಬಂದಿದೆ. ಆದರೆ, ಕರ್ನಾಟಕದಲ್ಲಿ ಯಾಕೆ ಇದು ಸಾಧ್ಯವಾಗುತ್ತಿಲ್ಲ? ಎಂದು ಅವರು ಕೇಳಿದರು.

ಇದಕ್ಕೂ ಮೊದಲು ಭಗವದ್ಗೀತಾ ಸಮರ್ಪಣಾ ಸಮಾರಂಭದಲ್ಲಿ ಮಾತನಾಡಿದ ಸದಾನಂದ ಗೌಡ, ಮನುಷ್ಯನ ಅಂತರಂಗ, ಬಹಿರಂಗವನ್ನು ಶುದ್ಧೀಕರಿಸುವಂಥದ್ದು ಭಗವದ್ಗೀತೆ. ಭಗವದ್ಗೀತೆ ಒಳ್ಳೆಯ ಸಮಾಜ ನಿರ್ಮಾಣಕ್ಕೆ ತನ್ನ ಕೊಡುಗೆ ನೀಡಿದೆ. ಹಾಗಾಗಿ ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಪಠ್ಯದಲ್ಲಿ ಭಗವದ್ಗೀತೆಯ ಸಾರ ಅಳವಡಿಸಲಾಗುವುದು ಎಂದು ಹೇಳಿದರು.

ಈ ಹಿಂದೆ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಲು ಮುಂದಾದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿಗೆ ರಾಜ್ಯಾದ್ಯಂತ ತೀವ್ರ ರೀತಿಯ ವಿರೋಧ ವ್ಯಕ್ತವಾಗಿತ್ತು. ಜೊತೆಗೆ ದೊಡ್ಡಮಟ್ಟದಲ್ಲಿ ಪ್ರತಿಭಟನೆ ಕೂಡಾ ನಡೆದಿತ್ತು ಎಂಬುದು ಗಮನಾರ್ಹ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+