ಜಾಹೀರಾತು ಹೋರ್ಡಿಂಗ್ ಮುಕ್ತವಾಗಿ ಮೈಸೂರು

ಫೆ.1ರಿಂದ 'ಫ್ಲೆಕ್ಸ್ ರಹಿತ ಮೈಸೂರು" ಘೋಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಹೇಳಿದ್ದಾರೆ.
ಜಾಹೀರಾತು ಕಾನೂನು ಜಾರಿ: ಸಾಂಸ್ಕತಿಕ ಹಾಗೂ ಪಾರಂಪರಿಕ ನಗರಿ ಎಂದೇ ಖ್ಯಾತಿಯಾಗಿರುವ ಮೈಸೂರು ನಗರದ ಸೌಂದರ್ಯ ಕಾಪಾಡುವ ಹಿತದೃಷ್ಟಿಯಿಂದ ಮೈಸೂರನ್ನು ಬ್ಯಾನರ್ ಹಾಗೂ ಫ್ಲೆಕ್ಸ್ ಮುಕ್ತ ನಗರವೆಂದು ಘೋಷಿಸಲು ಉದ್ದೇಶಿಸಲಾಗಿದೆ.
ನಗರದಲ್ಲಿ ಯಾವುದೇ ರೀತಿಯ ಬ್ಯಾನರ್ ಹಾಗೂ ಫ್ಲೆಕ್ಸ್‌ಗಳನ್ನು ಹಾಕುವಾಗಿಲ್ಲ. ಪಾಲಿಕೆಯಿಂದ ಅನುಮತಿ ಪಡೆದ ಜಾಹೀರಾತುಗಳನ್ನು ಹೊರತುಪಡಿಸಿ ಯಾವುದೇ ಬ್ಯಾನರ್, ಹೋಲ್ಡಿಂಗ್ಸ್, ಫ್ಲೆಕ್ಸ್ ಹಾಕಿರುವುದು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಕೆ.ಎಸ್. ರಾಯ್ಕರ್ ಹೇಳಿದ್ದಾರೆ.[ಮೈಸೂರು : ಹೆರಿಟೇಜ್ ಅಥವ ಹೋರ್ಡಿಂಗ್ ಸಿಟಿ ?]












Click it and Unblock the Notifications