ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೋಭಾ ಮೇಡಂ ಗಮನಕ್ಕೆ:ಮತ್ತೆ ವಿದ್ಯುತ್ ದರ ಗಗನಕ್ಕೆ

By Srinath
|
Google Oneindia Kannada News

power-tariff-to-rise-in-karnataka
ಬೆಂಗಳೂರು, ಜ.17: ಕಳಪೆ ವಿದ್ಯುತ್ ಪೂರೈಕೆಯಿಂದ ಕಂಗೆಟ್ಟಿರುವ ಗ್ರಾಹಕರಿಗೆ ಸದ್ಯದಲ್ಲೇ ದರ ಏರಿಕೆಯ ಬಿಸಿಯೂ ತಟ್ಟಲಿದೆ. ಏಕೆಂದರೆ, ವಿದ್ಯುತ್ ದರವನ್ನು ಯೂನಿಟ್‌ಗೆ 50 ಪೈಸೆ ಹೆಚ್ಚಳ ಮಾಡುವಂತೆ ಕೋರಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಮನವಿ ಸಲ್ಲಿಸಲು ಎಸ್ಕಾಂಗಳು ಸಜ್ಜಾಗಿವೆ.

ಗುಜರಾತಿನಲ್ಲಿ 10 ವರ್ಷದಿಂದ ಏರಿಲ್ಲ:
'ಕಳೆದ ಹತ್ತು ವರ್ಷಗಳಿಂದ ಗುಜರಾತ್‌ನಲ್ಲಿ ವಿದ್ಯುತ್ ದರ ಏರಿಕೆ ಆಗಿಲ್ಲ. ಆದರೆ ಕರ್ನಾಟಕದಲ್ಲಿ ಮಾತ್ರ ಪ್ರತಿ ವರ್ಷ ದರ ಏರಿಕೆ ಆಗುತ್ತಿದೆ. ಅಲ್ಲಿ ದರ ಹೆಚ್ಚಳ ಮತ್ತು ವಿದ್ಯುತ್ ಕಡಿತ ಮಾಡದೆ ಇಲಾಖೆಯನ್ನು ಅತ್ಯುತ್ತಮವಾಗಿ ನಿರ್ವಹಿಸಲಾಗುತ್ತಿದೆ. ಇಲ್ಲಿ ಯಾಕೆ ಸಾಧ್ಯವಾಗುತ್ತಿಲ್ಲ ಎಂಬ ಪ್ರಶ್ನೆ ಇಲಾಖೆಯ ಅಧಿಕಾರಿಗಳಿಂದಲೇ ಕೇಳಿಬರುತ್ತಿದೆ.

ಕಳೆದ ಅಕ್ಟೋಬರ್ 28ರಂದು ಯೂನಿಟ್‌ಗೆ ಸರಾಸರಿ 28 ಪೈಸೆ ಹೆಚ್ಚಳ ಮಾಡಲಾಗಿತ್ತು. ದರ ಹೆಚ್ಚಳವಾಗಿ ಇನ್ನೂ ಮೂರು ತಿಂಗಳಾಗಿಲ್ಲ, ಆಗಲೇ ಮತ್ತೊಮ್ಮೆ ದರ ಹೆಚ್ಚಳಕ್ಕೆ ಪ್ರಸ್ತಾವ ಸಿದ್ಧವಾಗಿದೆ.

ವಿದ್ಯುತ್ ಖರೀದಿಗೆ ಮಾಡುತ್ತಿರುವ ವೆಚ್ಚ, ಕಂಪನಿಗಳ ಆದಾಯ ಮತ್ತು ವೆಚ್ಚವನ್ನು ಆಧಾರವಾಗಿಟ್ಟುಕೊಂಡು ದರ ಏರಿಕೆಯ ಪ್ರಸ್ತಾವವನ್ನು ಸಿದ್ಧಪಡಿಸಲಾಗಿದೆ. 2-3 ದಿನಗಳಲ್ಲಿ ಅಧಿಕೃತವಾಗಿ ಆಯೋಗಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು.

English summary
Karnataka BJP Government to rise power tariff: The propasal is that power tariffmay rise 50 paise per unit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X