ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಯುವತಿ, ವಿದ್ಯಾರ್ಥಿ, ಪ್ರೊಫೆಸರ್ ಆತ್ಮಹತ್ಯೆ

By Prasad
|
Google Oneindia Kannada News

Three commit suicide in Bangalore
ಬೆಂಗಳೂರು, ಜ. 20 : ಆತ್ಮಹತ್ಯೆಗಳ ನಗರ ಎಂದು ಬಿರುದು ಗಳಿಸುತ್ತಿರುವ ಬೆಂಗಳೂರಿನಲ್ಲಿ ಶುಕ್ರವಾರ ಒಂದೇ ದಿನ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿ, ಐಐಎಸ್ಸಿ ಪ್ರೊಫೆಸರ್ ಮತ್ತು ಹಸೆಮಣೆಯೇರಬೇಕಿದ್ದ ಯುವತಿ ಬದುಕಿನ ವ್ಯಾಪಾರಕ್ಕೆ ಗುಡ್ ಬೈ ಹೇಳಿದ್ದಾರೆ.

ಬೆಂಗಳೂರು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ಬಳಿಯಿರುವ ಕೈಕೊಂಡನಹಳ್ಳಿಯಲ್ಲಿರುವ ಅಮೃತ ಸ್ಕೂಲ್ ಆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಜಿತೇಂದ್ರ ಕಾಲೇಜಿನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಜಿತೇಂದ್ರ ಬಿಟೆಕ್ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ.

ಆಡಳಿತ ಮಂಡಳಿಯ ಕಿರುಕುಳಕ್ಕೆ ಬೇಸತ್ತು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕಾಲೇಜಿನ ವಿದ್ಯಾರ್ಥಿಗಳು ಇಂದು ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಜಿತೇಂದ್ರ ಯಾವುದೇ ಡೆತ್ ನೋಟ್ ಬರೆದಿಟ್ಟಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ, ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು ಆರ್.ಟಿ. ನಗರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅನುಷ್ಕಾ ಎಂಬ ಯುವತಿಯ ಮದುವೆ ನಿಶ್ಚಿತಾರ್ಥ ಕೂಡ ಮುಗಿದಿತ್ತು. ಆದರೆ, ಗಂಡಿನ ಕಡೆಯವರಿಂದ 3 ಲಕ್ಷ ರು. ವರದಕ್ಷಿಣೆ ಬೇಡಿಕೆ ಬಂದಿತ್ತು. ಇದರಿಂದ ಬೇಸತ್ತ ಆಕೆ ಬದುಕಿಗೆ ಕೊನೆ ಹೇಳಲು ನಿರ್ಧರಿಸಿದಳು.

ಮತ್ತೊಂದು ಘಟನೆಯಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ಪ್ರೊಫೆಸರಾಗಿದ್ದ ಪರಾಗ್ (52) ಎಂಬುವವರು ಉರುಳು ಬಿಗಿದುಕೊಂಡು ಇಹಲೋಕ ತ್ಯಜಿಸಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಸಾವಿಗೆ ಶರಣಾಗುತ್ತಿರುವುದಾಗಿ ಪರಾಗ್ ಅವರು ಪತ್ರ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

English summary
Is there any way to save Bangalore from being called as suicide city? In one day on Friday 3 people committed suicide by hanging. Engineering student, yet to be married young girl and IISc professor have ended their life.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X