ರಾಜೀನಾಮೆ ಸುದ್ದಿ ನಿರಾಕರಿಸಿದ ಎಸ್ ಎಂ ಕೃಷ್ಣ

ಕೋರ್ಟ್ ನೀಡಿರುವ ಆದೇಶವನ್ನು ಪೂರ್ತಿಯಾಗಿ ಅಧ್ಯಯನ ನಡೆಸಿ, ನಮ್ಮ ವಕೀಲರೊಡನೆ ಚರ್ಚಿಸುತ್ತೇನೆ. ನಂತರ ಹೇಳಿಕೆ ನೀಡುತ್ತೇನೆ. ಈ ಸಂದರ್ಭದಲ್ಲಿ ರಾಜೀನಾಮೆ ಬಗ್ಗೆ ಬಂದ ಸುದ್ದಿಯನ್ನು ನಿರಾಕರಿಸಿದ ಅವರು, ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿದೆ ಎಂದು ಹೇಳಿದರು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೊರೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಈ ಬಗ್ಗೆ ಈಗಲೇ ಏನು ಹೇಳಲಾಗದು ಎಂದಷ್ಟೇ ಉತ್ತರಿಸಿದರು.
ಅಕ್ರಮ ಗಣಿಗಾರಿಕೆ ವಿರುದ್ಧ ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ಟಿಜೆ ಅಬ್ರಹಾಂ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. ಅವರು ಸಲ್ಲಿಸಿರುವ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ ತನಿಖೆಗೆ ನ್ಯಾ. ಸುಧೀಂದ್ರರಾವ್ ಅವರು ಆದೇಶಿಸಿದ್ದರು.
ಲೋಕಾಯುಕ್ತ ಪೊಲೀಸರು ಹಾಕಿರುವ ಎಫ್ ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ ಹೊಕ್ಕಿದ್ದರು. ಆದರೆ, ಹೈಕೋರ್ಟ್ ಮಾಜಿ ಸಿಎಂ ಕೃಷ್ಣ ಹಾಗೂ ಕುಮಾರಸ್ವಾಮಿ ವಿರುದ್ಧ ತನಿಖೆ ಮುಂದುವರೆಸುವಂತೆ ಆದೇಶಿಸಿದೆ.












Click it and Unblock the Notifications