ಖಂಡಿತಾ ಜೆಡಿಎಸ್ ಬಿಡೊಲ್ಲ: ರಾಜೇಶ್
ಬೆಂಗಳೂರು,
ಜ.23: ಯಾವುದೇ ಕಾರಣಕ್ಕೂ ಜಾತ್ಯತೀತ ಜನತಾದಳ ಬಿಡುವುದಿಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ವಿರುದ್ದ ಸೆಟೆದು ನಿಂತಿರುವ ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಪುತ್ರ ರಾಜೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. id="toptextpromo">'ಪಕ್ಷದ
ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ನನಗೆ ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನ ನೀಡುವುದಾಗಿ ಮಾತು ಕೊಟ್ಟಿದ್ದು ನಿಜ. ದೇವರ ಮುಂದೆ ಬೇಕಾದರೆ ಪ್ರಮಾಣ ಮಾಡಬಲ್ಲೆ. ಅವರೀಗ ವಚನ ಭ್ರಷ್ಟರಾಗಿದ್ದಾರೆ. ಅಧ್ಯಕ್ಷ ಸ್ಥಾನ ದೊರೆಯದ ಕಾರಣ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಉಂಟಾಗಿದೆ. ಹೀಗಾಗಿ ರಾಜಿನಾಮೆ ನೀಡಲು ತೀರ್ಮಾನಿಸಿದ್ದೇನೆ' ಎಂದು ರಾಜೇಶ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. id='are-slot-1' class='oiad oi-axt oiadv'> id='top-searched-articles'>ರಾಜ್ಯ
ಯುವ ಘಟಕಕ್ಕೆ ಹೊಸದಾಗಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಧು ಬಂಗಾರಪ್ಪ ಅವರ ಬಗ್ಗೆ ನನಗೆ ಅಸಮಾಧಾನವಿಲ್ಲ ಎಂದೂ ಅವರು ಇದೇ ಸಂದರ್ಭ ಸ್ಪಷ್ಟನೆ ನೀಡಿದ್ದಾರೆ.











Click it and Unblock the Notifications